ಹಾವೇರಿ, ಜ 29 : ಯುವತಿಯ ಮೇಲೆ ಆ್ಯಸಿಡ್ ಮಾಡಿ ಪರಾರಿಯಾಗಿದ್ದ ಆರೋಪಿ ಪ್ರಸಾದ್‌ನನ್ನು ಬಂಧಿಸುವಲ್ಲಿ ಹಾವೇರಿ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಬಂಧಿತ ಪ್ರಸಾದ್ ಹಾನಗಲ್ ತಾಲೂಕಿನ ಚಿಕ್ಕಬಾಸೂರ ಗ್ರಾಮದ ನಿವಾಸಿಯಾಗಿದ್ದು, ಪ್ರೀತಿ ನಿರಾಕರಿಸಿದಳೆಂಬ ಕಾರಣಕ್ಕೆ ಕಳೆದ ಮಂಗಳವಾರ ಹಾವೇರಿಯ ಶಿವಲಿಂಗೇಶ್ವರ ನಗರದ ನಿವಾಸಿಯಾದ ಯುವತಿ ಮೇಲೆ ಹಾವೇರಿ ನಗರದಲ್ಲಿ ಗಾರ್ಮೆಂಟ್ಸ್ ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಪಲ್ಸರ್ ಬೈಕ್‌ನಲ್ಲಿ ಬಂದ ಪ್ರಸಾದ್ ಆ್ಯಸಿಡ್ ಎರಚಿ ಪರಾರಿಯಾಗಿದ್ದ.
ಗಾಯಾಳು ಯುವತಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.