ನವದೆಹಲಿ, ನ 27 - ಜಮ್ಮು ಕಾಶ್ಮೀರಕ್ಕೆ ಸ್ವಾಯತ್ತತೆ ನೀಡಿದ್ದ ಸಂವಿಧಾನದ 370ನೇ ವಿಧಿಯ ರದ್ದತಿ ನಂತರ ಕಾಶ್ಮೀರದಲ್ಲಿ ವಿಧಿಸಿರುವ ನಿಷೇಧಾಜ್ಞೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ ಬುಧವಾರ ತೀರ್ಪನ್ನು ಕಾಯ್ದರಿಸಿತು.
ಅರ್ಜಿ ಸಲ್ಲಿಸಿದ್ದು, ಸಂವಿಧಾನದ 370ನೇ ವಿಧಿ ರದ್ದತಿ ಕಾನೂನುಬಾಹಿರವಾಗಿದ್ದು, ಅಲ್ಲಿ ನಿಷೇಧಾಜ್ಞೆ ಹೇರಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ಆರೋಪಿಸಿದ್ದರು.
ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಜಮ್ಮು ಕಾಶ್ಮೀರದಲ್ಲಿ ಶಾಂತಿ ಭಂಗವಾಗದಂತೆ ತಡೆಯಲು ಮಾತ್ರ ಅಲ್ಲಿನ ದೂರವಾಣಿ, ಮೊಬೈಲ್ ಸಂಪರ್ಕ ಮತ್ತಿತರರ ಸಂಪರ್ಕವನ್ನು ಕಡಿತುಗೊಳಿಸಿ ನಿಷೇದಾಜ್ಞೆ ವಿಧಿಸಲಾಗಿದೆ ಎಂದು ಸಮರ್ಥನೆ ನೀಡಿದರು.