ಕೃತಕ ಬುದ್ಧಿಮತ್ತೆ ಮನುಷ್ಯರಿಗಿಂತ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ: ಬಾಗೇವಾಡಿ
Artificial intelligence will give better results than humans: Bagevadi
ಧಾರವಾಡ 18: ಕೃತಕ ಬುದ್ಧಿಮತ್ತೆ ನಮ್ಮ ದಿನನಿತ್ಯದ ಜೀವನದ ಒಂದು ಭಾಗವಾಗಿದೆ. ನಾವು ಸಿರಿ ಅಥವಾ ಅಲೆಕ್ಸಾ ಅವರನ್ನು ನಮ್ಮ ನೆಚ್ಚಿನ ಸಂಗೀತವನ್ನು ನುಡಿಸಲು ಕೇಳುತ್ತೇವೆ. ಹೀಗೆ ಕೃತಕ ಬುದ್ಧಿಮತ್ತೆ ಮನುಷ್ಯರಿಗಿಂತ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ ಎಂದು ಯುವ ಚಿಂತನಾ ಸಮಾವೇಶದ ಸರ್ವಾಧ್ಯಕ್ಷರಾದ ಸುನೀಲ ಬಾಗೇವಾಡಿ ಹೇಳಿದರು. ಅವರು ಪಂ. ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ ಧಾರವಾಡ ಮತ್ತು ಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಕೆ ಎಸ್ ಜಗಳೂರು ಕಲಾ ಮತ್ತು ಡಾ. ಎಸ್‌ಎಂ ಶೇಷಗಿರಿ ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ 2ನೇ ಯುವ ಚಿಂತನಾ ಸಮಾವೇಶ 2025ರ ಅಂಗವಾಗಿ ದೇವರ ಹುಬ್ಬಳ್ಳಿಯ ಸಿದ್ಧಾಶ್ರಮದಲ್ಲಿ ಹಮ್ಮಿಕೊಂಡ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಕೃತಕ ಬುದ್ಧಿಮತ್ತೆ ಪ್ರಗತಿಗಳ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುರಕಡ್ಲಿ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯ ದತ್ತಾ ಕಾಮಕರ ವಹಿಸಿ ಮಾತನಾಡಿದರು.
ಉಪನ್ಯಾಸ ಕಾರ್ಯಕ್ರಮವನ್ನು ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಶ್ರೀಧರ ಜೋಶಿ ಹಾಗೂ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ರಾಮಚಂದ್ರ ನಾಯಕ ಎನ್ ಯಾದವಾಡ ಅವರು ಕೃತಕ ಬುದ್ಧಿಮತ್ತೆಯ ಪ್ರಗತಿಗಳ ಕುರಿತು ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಕಲಾವಿದರಾದ ಪ್ರಮೀಳಾ ಜಕ್ಕಣ್ಣವರ್ ಪಂ. ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನದ ಕಾರ್ಯದರ್ಶಿಗಳು, ಸಾಹಿತಿಗಳು, ಹಾಗೂ ಸಂಘಟಕರಾದ ಮಾರ್ತಾಂಡಪ್ಪ ಕತ್ತಿ,ರಾಷ್ಟ್ರೀಯ ಸೇವಾ ಯೋಜನೆ ಘಟಕ 2ರ ಡಾ. ಅಶ್ವಿನಿ ಎಸ್ ಪಾಟೀಲ, ರಾಷ್ಟ್ರೀಯ ಸೇವಾ ಯೋಜನೆ ಘಟಕ 1ರ ಪ್ರೊ. ಅನಿತಾ ಕಡಪಟ್ಟಿ ಕಾರ್ಯಕ್ರಮ ಅಧಿಕಾರಿಗಳಾಗಿ ಹಾಗೂ ಯುವ ಚಿಂತನ ಸಮಾವೇಶದ ಸಂಯೋಜಕರಾದ ಅರುಣ ಕುಮಾರ ಶೀಲವಂತ, ನೇಹಾ ಬುದ್ನಿ, ಶಕುಂತಲಾ ಬಿರಾದಾರ ಮಾತನಾಡಿದರು.ವಿದ್ಯಾರ್ಥಿನಿಯರಾದ ರಶ್ಮಿ ಪಿ ನಿರೂಪಿಸಿದರು. ಸೌಮ್ಯ ಉಪ್ಪಿನ ಹಾಗೂ ತಂಡದವರು ಪ್ರಾರ್ಥಿಸಿದರು. ಮಮತಾ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಕಲಾವತಿ ಕಡಪಟ್ಟಿ, ರತ್ನಾ ಕಡಪಟ್ಟಿ, ಅನುಷಾ ಬಳಗಾನೂರ, ಮಹಾದೇವ ಸುಳ್ಳದ, ಗಗನಾ ಡಿ.ಕೆ, ರೇಣುಕಾ ಗೊಡಚಿ, ಭವಾನಿ ಹಿರೇಮಠ, ಸವಿತಾ ಗಾಣಿಗೇರ, ಶುಭಾ ಹೆಗಡೆ ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 