ಇಂಧನ ಕೃತಕ ಅಭಾವ ; ಕೃಷಿ ಚಟುವಟಿಕೆ ಗೆ ಅಡ್ಡಿ
Artificial shortage of fuel; disruption to agricultural activities
ಲೋಕದರ್ಶನ ವರದಿ
ಹೂವಿನಹಡಗಲಿ 22: ಅಂತಾರಾಷ್ಟ್ರೀಯ ಮಟ್ಟದಲ್ಲಿ ಏರಿಳಿತಗಳ ನಡುವೆ ಪಟ್ಟಣದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಕೃತಕ ಅಭಾವ ಹಾಗೂ ಪೂರೈಕೆಯಲ್ಲಿ ವ್ಯತ್ಯಯ ದಿಂದ ಬಂಕ್ ಗಳಲ್ಲಿ ಡೀಸೆಲ್ಗೆ ಅಭಾವ ಸೃಷ್ಟಿಯಾಗಿದ್ದು, ರೈತರು ಸೇರಿ ವಾಹನಗಳ ಮಾಲೀಕರು ಡಿಸೇಲ್ ಗಾಗಿ ಸರತಿ ಸಾಲಿನಲ್ಲಿ ನಿಂತು ಜಾಗರಣೆ ಮಾಡುವ ಪರಿಸ್ಥಿತಿ ಎದುರಾಗಿದೆ.ಈಗಾಗಲೇಮುಂಗಾರು ಆರಂಭವಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ನೇಗಿಲು, ರೋಟಾವೇಟರ್, ಬಿತ್ತನೆ ಸೇರಿ ಇತರ ಯಾಂತ್ರೀಕೃತ ಕೃಷಿ ಸಾಧನಗಳಿಗೆ ಡೀಸೆಲ್ ಮತ್ತು ಪೆಟ್ರೋಲ್ ಅಗತ್ಯವಾಗಿದೆ. ಸದ್ಯ ಇಂಧನದ ಅಭಾವ ಉಂಟಾಗಿರುವುದು .ಪರಿಣಾಮ ಬೀರುವ ಸಾಧ್ಯತೆಯಿದೆ. ಹಳ್ಳಿಗಳಲ್ಲಿ ಟ್ಯಾಕ್ಟರ್ಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಮಾಲೀಕರು ಹೆಚ್ಚುವರಿಯಾಗಿ ಕ್ಯಾನ್ ಗಳಲ್ಲಿ ಇಂಧನ ಸಂಗ್ರಹಿಸಿಟ್ಟು ಕೊಳ್ಳುತ್ತಿದ್ದಾರೆ. ಇದಕ್ಕಾಗಿ ಬಂಕ್ಗಳ ಮುಂದೆ ಕ್ಯಾನ್ ಹಿಡಿದು ರಾತ್ರಿಯಿಡೀ ಸರದಿಯಲ್ಲಿ ನಿಂತು ಕಾಯುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 