ಕಲಾವಿದ ಕುಂದರಗಿಗೆ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರದಾನ
ಧಾರವಾಡ 18: ತಾಲೂಕಿನ ಇಟಿಗಟ್ಟಿ ಗ್ರಾಮದ ಜಾನಪದ ಕಲಾವಿದ ಪ್ರಭು ಬಸಪ್ಪ ಕುಂದರಗಿ ಅವರಿಗೆ ಕರ್ನಾಟಕ ಜಾನಪದ ಅಕಾಡೆಮಿಯ 2024 ನೆಯ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಯನ್ನು ಬೀದರದಲ್ಲಿ ಜರುಗಿದ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. 25 ಸಾವಿರ ನಗದು ಪುರಸ್ಕಾರ, ಪ್ರಶಸ್ತಿ ಫಲಕ ಹಾಗೂ ನೆನಪಿನ ಕಾಣಿಕೆಯನ್ನು ಈ ಪ್ರಶಸ್ತಿಯು ಒಳಗೊಂಡಿದೆ.
ಪ್ರಭು ಕುಂದರಗಿ ಅವರು ಕಳೆದ 40 ವರ್ಷಗಳಿಂದ ಜಾನಪದ ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿದ ಸುದೀರ್ಘ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಸದಸ್ಯ ಸಂಚಾಲಕ ವಿಜಯಕುಮಾರ್ ಸೋನಾರೆ, ರಜಿಸ್ಟ್ರಾರ್ ಎನ್. ನಮೃತ, ಶಂಕ್ರಣ್ಣ ಸಂಕಣ್ಣವರ್ ಇತರರು ಇದ್ದರು.