ನವದೆಹಲಿ ಆ. 25 ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಶನಿವಾರ ನಿಧನರಾದ ಬಿಜೆಪಿ ಹಿರಿಯ ನಾಯಕ , ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ ಪಕ್ಷದ ಮೂಲಗಳು ಹೇಳಿವೆ ನಿನ್ನೆಯೇ ಅವರ ಮೃತದೇಹವನ್ನು ಅವರ ನಿವಾಸಕ್ಕೆ ತರಲಾಗಿದೆ ಇಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೆಲ ಕಾಲ ಸಾರ್ವಜನಿಕ ದರ್ಶನಕ್ಕಾಗಿ ಇಡಲಾಗುವುದು ನಂತರ ನಿಗಮ ಬೋದ್ ಘಾಟ್ ಚಿತಗಾರದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಮೂಲಗಳುಹೇಳಿವೆ . ಕೆಲವು ದಿನಗಳ ಹಿಂದೆಯಷ್ಟೆ ನಿಧನರಾಗಿದ್ದ ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಅಂತ್ಯಕ್ರಿಯೆ ಸಹ ಇದೇ ಚಿತಗಾರದಲ್ಲಿ ಜರುಗಿತ್ತು.