ಬಿ.ವೈ.ವಿಜಯೇಂದ್ರಗೆ ಅರುಣ ಐಹೊಳೆ ಸತ್ಕಾರ

ಲೋಕದರ್ಶನ ವರದಿ

ರಾಯಬಾಗ 28: ದೇಶದಲ್ಲಿ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ಹಾಗೂ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರ ಸರಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಪಕ್ಷದ ಯುವಮೊರ್ಚಾ  ಪ್ರಧಾನ ಕಾರ್ಯದರ್ಶಿ  ಬಿ.ವೈ.ವಿಜಯೇಂದ್ರ ಹೇಳಿದರು. ಇತ್ತಿಚೆಗೆ ಪಟ್ಟಣದ ಹುಕ್ಕೇರಿ ಹಿರೇಮಠದಲ್ಲಿ ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬ ರೈತರ ಮನೆಗಳಿಗೆ ಮುಟ್ಟುವ ಯೋಜನೆ ಹಾಕಿಕೊಂಡಿದ್ದಾರೆ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ಈ ಭಾಗದಲ್ಲಿ ಬಂದ ಭೀಕರ ಪ್ರವಾಹದಲ್ಲಿ ಮೆನೆಗಳನ್ನು ಕಳೆದುಕೊಂಡ ನಿವಾಸಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ಸರಕಾರ 5 ಲಕ್ಷ ರೂಪಾಯಿಗಳನ್ನು ನೀಡುತ್ತಿದೆ ಜನರು ಗುಣಮಟ್ಟದ ಮನೆಗಳನ್ನು ಕಟ್ಟಿಕೊಳ್ಳಬೇಕೆಂದು ಹೇಳಿದರು. ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅರುಣ ಐಹೊಳೆ ಅವರು ಬಿ.ವೈ.ವಿಜಯೇಂದ್ರ ಅವರನ್ನು ಸತ್ಕರಿಸಿದರು. ಪೂಜ್ಯ ಡಾ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಎಸ್.ಎಸ್.ಕಾಂಬಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.