ಮದ್ಯದಂಗಡಿಗಳನ್ನು ತೆರೆಯುವ ಮೂಲಕ ಅರವಿಂದ ಕೇಜ್ರಿವಾಲ್ ಜನರ ಕೋಪಕ್ಕೆ ಗುರಿಯಾದರು: ಅಣ್ಣಾ ಹಜಾರೆ

Arvind Kejriwal drew public ire by opening liquor shops: Anna Hazare

ನವದೆಹಲಿ 22: ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಆದರೆ, ಮದ್ಯದಂಗಡಿಗಳನ್ನು ತೆರೆಯುವ ಮೂಲಕ ಜನರ ಕೋಪಕ್ಕೆ ಗುರಿಯಾದರು ಎಂದು ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದಿನ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಉತ್ತಮ ಕೆಲಸಗಳನ್ನು ಮಾಡುತ್ತಿದ್ದು, ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾದರು. ಅವರು ಉತ್ತಮ ಕೆಲಸ ಮಾಡುತ್ತಿದ್ದರಿಂದ ನಾನು ಅವರ ಬಗ್ಗೆ ಏನು ಮಾತನಾಡಿರಲಿಲ್ಲ. ಆದರೆ, ನಂತರದ ದಿನಗಳಲ್ಲಿ ಅವರು ನಿಧಾನವಾಗಿ ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲು ಮತ್ತು ಪರವಾನಗಿಗಳನ್ನು ನೀಡಲು ಪ್ರಾರಂಭಿಸಿದರು. ಇದು ನನಗೆ ಬೇಸರ ತಂದಿತ್ತು ಎಂದು ಹೇಳಿದ್ದಾರೆ.

ಮಹಿಳೆಯೊಬ್ಬರು ರಾಷ್ಟ್ರ ರಾಜಧಾನಿಯ ಮುಖ್ಯಮಂತ್ರಿಯಾಗಿರುವುದು ಹೆಮ್ಮೆಯ ಸಂಗತಿ. ರೇಖಾ ಗುಪ್ತಾ ಅವರ ಉತ್ತಮ ಆಲೋಚನೆ ಮತ್ತು ಕಾರ್ಯಗಳಿಗೆ ಜನರು ಮತ ಹಾಕಿದ್ದಾರೆ ಎಂದಿದ್ದಾರೆ.