ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಪಂದ್ಯಾವಳಿಗೆ ಆರ್ಯನ್ ಸೂರ್ಯವಂಶಿ ಆಯ್ಕೆ
Aryan Suryavanshi selected for national basketball tournament
ಬೆಳಗಾವಿ (ನಿಪ್ಪಾಣಿ) 20: ಇಲ್ಲಿನ ಕೆಎಲ್‌ಇ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರ್ಯನ್ ಸಂದೇಶ್‌ಕುಮಾರ್ ಸೂರ್ಯವಂಶಿ 16 ವರ್ಷದೊಳಗಿನವರ ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಬಳ್ಳಾರಿಯ ವಾಡ್ಲಾ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಈ ಆಯ್ಕೆಯನ್ನು ಮಾಡಲಾಗಿತ್ತು. ಈ ಸ್ಪರ್ಧೆಗಳಲ್ಲಿ ಶಾಲಾ ವಿದ್ಯಾರ್ಥಿಗಳಾದ ಆರ್ಯನ್ ಸೂರ್ಯವಂಶಿ, ಪಾರ್ಥ್ ಹಿಂದೋಲ್, ಆದಿತ್ಯ ಟೋನ್, ಉಮ್ರಾಜ್ ನಾಗರ್ಜಿ ಭಾಗವಹಿಸಿದ್ದರು.
ಅವರಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಆರ್ಯನ್ ಸೂರ್ಯವಂಶಿ ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಆರ್ಯನ್ ಸ್ಥಳೀಯ ಛಾಯಾಗ್ರಾಹಕ ಸಂದೇಶ್ ಸೂರ್ಯವಂಶಿ ಅವರ ಮಗ. ಆರ್ಯನ್ ಅವರ ಆಯ್ಕೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.
ಆರ್ಯನ್ ಅವರಿಗೆ ಶಾಲಾ ತರಬೇತುದಾರ ನಾರಾಯಣ ಪಾಟೀಲ, ದೈಹಿಕ ಶಿಕ್ಷಕರಾದ ಬಸವರಾಜ ಕುಂಬಾರ, ಮಂಜುಳಾ ಬಾಣಿ, ಪ್ರಾಚಾರ್ಯರಾದ ಕಾಂಚನ್ ದಮ್ಮಳ, ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಪ್ರವೀಣ ಬಾಗೇವಾಡಿ, ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಮಾರ್ಗದರ್ಶನ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 