ಮುಂಬೈ 24: ಚಾಂಪಿಯನ್ಸ್ ಟ್ರೋಫಿಯಲ್ಲಿ ಸಾಂಪ್ರಾದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ನಿನ್ನೆ ನಡೆದ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುವ ಮೂಲಕ 2017ರ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿದೆ. ಅಲ್ಲದೆ ಅಭಿಮಾನಿಗಳು ಸಹ ಭಾರತದ ಗೆಲುವಿನ ನಂತರ ವಿಜಯೋತ್ಸವ ಆಚರಿಸಿದರು.
ನಿನ್ನೆ ಭಾರತದ ನಾಯಕ ರೋಹಿತ್ ಶರ್ಮಾ ಅವರನ್ನು ಪಾಕ್ ಬೌಲರ್ ಬೌಲ್ಡ್ ಔಟ್ ಮಾಡಿದ್ದರು. ರೋಹಿತ್ ಶರ್ಮಾ ಔಟಾಗುತ್ತಿದ್ದಂತೆ ಮಹಾರಾಷ್ಟ್ರದ ಮಾಲ್ವನ್‌ನಲ್ಲಿ ಅಂಗಡಿ ಮಾಲೀಕನೊಬ್ಬ "ಪಾಕಿಸ್ತಾನ ಜಿಂದಾಬಾದ್" ಘೋಷಣೆಗಳನ್ನು ಕೂಗಿದ್ದನು.
ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸರ್ಕಾರ ಅಕ್ರಮವಾಗಿ ಅಂಗಡಿ ಇಟ್ಟುಕೊಂಡಿದ್ದ ಆ ಮುಸ್ಲಿಂ ವ್ಯಕ್ತಿಯ ಅಂಗಡಿಯನ್ನು ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ನೆಲಸಮ ಮಾಡಲಾಗಿದೆ ಎಂದು ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಆರೋಪಗಳ ನಡುವೆ, ಅಕ್ರಮ ರಚನೆಗಳ ವಿರುದ್ಧ ಈ ಕ್ರಮ ನಡೆದಿದೆ.