ಕೊರೊನಾ ವೈರಸ್ ತಡೆಗೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ

ಹಾವೇರಿ:ಎ. 04: ಕರೋನಾ ವೈರಸ್(ಕೋವಿಡ್-19) ಹರಡದಂತೆ  ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾವೇರಿ ಉಪವಿಭಾಗದ ವ್ಯಾಪ್ತಿಯ ಹಾವೇರಿ, ರಾಣೇಬೆನ್ನೂರ, ಬ್ಯಾಡಗಿ, ಹಿರೇಕೆರೂರು ಹಾಗೂ ರಟ್ಟೀಹಳ್ಳಿ ತಾಲೂಕುಗಳ ತಹಶೀಲ್ದಾರಗಳಿಗೆ ಹಾವೇರಿ ಉಪವಿಭಾಗಾಧಿಕಾರಿ ಹಾಗೂ ಉಪವಿಭಾಗದ ದಂಡಾಧಿಕಾರಿ ಡಾ.ದಿಲೀಷ್ ಶಶಿ ಅವರು ಸೂಚನೆ ನೀಡಿದ್ದಾರೆ.

ಸಾರ್ವಜನಿಕರಿಗೆ ಅವಶ್ಯವಿರುವ ದೈನಂದಿನ ಸಾಮಗ್ರಿಗಳನ್ನು ವರ್ತಕರು ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದು, ತಹಶೀಲ್ದಾರರು ಆಹಾರ ನಿರೀಕ್ಷಕರೊಂದಿಗೆ ಭೇಟಿ ನೀಡಿ ತಪಾಸನೆ ನಡೆಸಿ ದೈನಂದಿನ ಆಹಾರ ಹಾಗೂ ಅವಶ್ಯಕ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಯಾಗದಂತೆ ತಡೆಗಟ್ಟಬೇಕು. ಎಪಿಎಂಸಿ ಮಾರುಕಟ್ಟೆ ಹಾಗೂ ನಗರದ ದಿನಸಿ ಅಂಗಡಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಯಾಗುತ್ತಿರುವ ಬಗ್ಗೆ ಪರಿಶೀಲಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನೈರ್ಮಲ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.  ಸಕರ್ಾರ ಎರಡು ತಿಂಗಳ ಆಹಾರಧಾನ್ಯ ಮುಂಗಡವಾಗಿ ವಿತರಿಸುತ್ತಿದ್ದು, ಈ ವ್ಯವಸ್ಥೆಯ ದುರುಪಯೋಗವಾಗದಂತೆ ಎಲ್ಲ ಪಡಿತರದಾರರಿಗೆ ತಲುಪುವಂತೆ ಅಗತ್ಯ ಮೇಲ್ವಿಚಾರಣೆ ನಡೆಸಬೇಕು. ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆ, ನಸರ್ಿಂಗ್ ಹೋಂಗಳು ಹಾಗೂ ಲ್ಯಾಬರೋಟರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ನಿಗಾವಹಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿಯಿಂದ ವಿವಿಧ ತಂಡಗಳನ್ನು ರಚಿಸಲಾಗಿದ್ದು.

            ಈ ತಂಡಗಳ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಬೇಕು. ತಾಲೂಕು ಮಟ್ಟದಲ್ಲಿ ಸ್ಥಾಪಿಸಲಾದ ನಿಯಂತ್ರಣ ಕೊಠಡಿಗಳು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಿ ಸಾರ್ವಜನಿಕರಿಂದ ಬರುವಂತ ದೂರುಗಳನ್ನು ಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

ಹೊರ ರಾಜ್ಯಗಳಿಂದ ಆಗಮಿಸುವ ವ್ಯಕ್ತಿಗಳ ಮೇಲೆ ತೀವ್ರ ನಿಗಾವಹಿಸಬೇಕು. ತಾಲೂಕುಗಳಲ್ಲಿ ಈಗಾಗಲೇ ಸ್ಥಾಪಿಸಲಾಗಿರುವ ಚೆಕ್ಪೋಸ್ಟ್ಗಳು ಹಾಗೂ ಪ್ಲೈಯಿಂಗ್ ಸ್ಕ್ವಾಡ್ಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸಬೇಕು.

         ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ಸಂಗ್ರಹವಾಗುವ ವಂತಿಕೆ ಹಣವನ್ನು ದುರುಪಯೋಗವಾಗದಂತೆ ನೇರವಾಗಿ  ಮುಖ್ಯಮಂತ್ರಿಗಳ ನಿಧಿಗೆ ಜಮೆ ಮಾಡಲು ಕ್ರಮವಹಿಸಬೇಕು.

 ಕ್ವಾರಂಟೈನ್ಗೆ ಒಳಪಡಿಸಿರುವ ವ್ಯಕ್ತಿಗಳ ಮೇಲೆ ತೀವ್ರ ನಿಗಾವಹಿಸಿ ಸದರಿಯವರು ಸಾರ್ವಜನಿಕರ ಸಂಪರ್ಕಕ್ಕೆ ಒಳಗಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕು. ಎಲ್ಲ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಮಾಡದಂತೆ ಅಗತ್ಯ ಕ್ರಮಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಕಾಲಕಾಲಕ್ಕೆ ನೀಡುವ ನಿದರ್ೆಶನಗಳನ್ನು ಕಟ್ಟುನಿಟ್ಟಾನಿ ಪಾಲಿಸಬೇಕು ಎಂದು ಸೂಚನೆ ನೀಡಿದ್ದಾರೆ.