‘ಊರೊಂದು ಕರೆದಂತೆ, ಹಿಂದೇನೋ ಮರೆತಂತೆ’
ಬೆಂಗಳೂರು, ಜ 22, ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ವಿಜಯ ರಾಘವೇಂದ್ರ ಅಭಿನಯದ ಮಾಲ್ಗುಡಿ ಡೇಸ್ ಚಿತ್ರದ ‘ಊರೊಂದು ಕರೆದಂತೆ, ಹಿಂದೇನೋ ಮರೆತಂತೆ’ ಹಾಡು ಸದ್ದು ಮಾಡುತ್ತಿದೆ. ಪಿಆರ್ಕೆ ಆಡಿಯೋ ಕಂಪನಿಯ ಯೂಟ್ಯೂಬ್ ತಾಣದಲ್ಲಿ ಬಿಡುಗಡೆಯಾದ 35 ಸೆಕೆಂಡ್ ಗಳ ಹಾಡನ್ನು, ಒಂದೇ ಗಂಟೆಯ ಅವಧಿಯಲ್ಲಿ 7 ಸಾವಿರಕ್ಕೂ ಹೆಚ್ಚು ಅಧಿಕ ಮಂದಿ ವೀಕ್ಷಿಸಿದ್ದಾರೆ. ಗಗನ್ ಬದೇರಿಯಾ ಅವರು ಸಂಗೀತ ಸಂಯೋಜಿಸಿರುವ ಈ ಹಾಡಿಗೆ ರಘು ದೀಕ್ಷಿತ್ ಮತ್ತು ವೈಷ್ಣವಿ ರವಿ ದನಿಯಾಗಿದ್ದಾರೆ. ಲಕ್ಷ್ಮೀನಾರಾಯಣ ಮಾಲ್ಗುಡಿ ಎಂಬ ಕಾಲ್ಪನಿಕ ಪಾತ್ರ ನಿರ್ವಹಿಸಿರುವ ವಿಜಯ ರಾಘವೇಂದ್ರ ವೃದ್ಧನ ಗೆಟಪ್ ನಲ್ಲಿ ಗಮನ ಸೆಳೆಯುತ್ತಾರೆ. ಯುವತಿಯೊಂದಿಗಿನ ಈ ವೃದ್ಧನ ಸ್ನೇಹ ಸಂಬಂಧವೇ ಚಿತ್ರಕಥೆಯ ಹಂದರವಾಗಿದ್ದು, ಮುಂದಿನ ತಿಂಗಳು ತೆರೆಗೆ ಬರಲಿದೆ. ಸ್ವಯಂ ಪ್ರಭಾ ಎಂಟರ್ಟೈನ್ಮೆಂಟ್ ಬ್ಯಾನರ್ನಡಿ ಕೆ. ರತ್ನಾಕರ್ ಕಾಮತ್ ನಿರ್ಮಿಸಿರುವ ಮಾಲ್ಗುಡಿ ಡೇಸ್ ಸಿನಿಮಾವನ್ನು ಕಿಶೋರ್ ಮೂಡಬಿದ್ರೆ ನಿರ್ದೇಶಿಸಿದ್ಧಾರೆ. 65 ವರ್ಷದ ಹಿರಿಯ ನಾಗರಿಕನ ಪಾತ್ರದಲ್ಲಿ ವಿಜಯ್ ರಾಘವೇಂದ್ರ ಅಭಿನಯವಿರುವ ಚಿತ್ರ ಸಾಕಷ್ಟು ನಿರೀಕ್ಷೆ ಸೃಷ್ಟಿಸಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 