ಅಧಿವೇಶನ ಮುಗಿಯುತ್ತಿದ್ದಂತೆ D.K ಶಿವಕುಮಾರ್ CM
As the session ended D.K Sivakumar CM
ಬೆಳಗಾವಿ (ಸುವರ್ಣ ಸೌಧ): ‘ಸಂಕ್ರಾಂತಿಯಲ್ಲ, ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ’ ಎಂದು ಡಿ.ಕೆ. ಶಿವಕುಮಾರ್ ಅವರ ಆಪ್ತ, ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ‘ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕ ಆಗಿಲ್ಲವೇ, ಹಾಗೇ ಡಿ.ಕೆ .ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದೆ ಅವರು ಮುಖ್ಯಮಂತ್ರಿ ಆಗುತ್ತಾರೆ. ಗುರುವಾರ ನಾವು 55 ಜನ ಶಾಸಕರು ಊಟಕ್ಕೆ ಸೇರಿದ್ದೆವು. ಊಟ ಮಾಡಿದ್ದೇವೆ ಅಷ್ಟೇ. ನಮಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು, ಆಗುತ್ತಾರೆ’ ಎಂದರು.
‘ಡಿ.ಕೆ .ಶಿವಕುಮಾರ್ ಕಷ್ಟಪಟ್ಟಿದಕ್ಕೆ ಫಲ ಸಿಗುತ್ತದೆ. ಅಧಿವೇಶನ ಮುಗಿದ ಬಳಿಕ ಆದಷ್ಟು ಬೇಗ ಆ ಫಲ ಸಿಗುತ್ತದೆ. ನಂಬರ್ ಮುಖ್ಯ ಅಲ್ಲ, ಹೈಕಮಾಂಡ್ನ ನಿರ್ದೇಶನ ಮುಖ್ಯ. ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸುತ್ತದೆ. ಹೈಕಮಾಂಡ್ ಹೇಳಿದರೆ ಯಾರು ಯಾಕೆ ಕೇಳಲ್ಲ? ಸಂಖ್ಯಾಬಲ ಮುಖ್ಯ ಅಲ್ಲ’ ಎಂದರು.
‘50-60 ಜನರು ಔತಣಕೂಟಕ್ಕೆ ಸೇರಿದ್ದರು. ಆದರೆ, ರಾಜಕೀಯ ಚರ್ಚೆ ಆಗಿಲ್ಲ. ಡಿ.ಕೆ.ಶಿವಕುಮಾರ್ ಕರೆದರೆ ಎಲ್ಲ 224 ಜನ ಶಾಸಕರೂ ಕರೆದರೆ ಊಟಕ್ಕೆ ಬರುತ್ತಾರೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎಂದಲ್ಲ. ವಿಶ್ವಾಸ, ಪ್ರೀತಿ ಒಂದು ಬಾಂಧವ್ಯ. ಎಲ್ಲರೂ ಡಿ.ಕೆ. ಶಿವಕುಮಾರ್ ಅವರಿಗೆ ಆತ್ಮೀಯರೇ, ಎಲ್ಲರೂ ಸ್ನೇಹಿತರೇ. ಅವರವರ ಪಕ್ಷದಲ್ಲಿ ಗುರುತಿಸಿಕೊಳ್ಳುತ್ತಾರೆ. ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷ’ ಎಂದೂ ಹೇಳಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 