ಆಶಿಸ್ ಸಾದರ್ ರಾಷ್ಟ್ರಮಟ್ಟಕ್ಕೆ ಆಯ್ಕೆ
Ashish Sadar selected for national level
ಲೋಕದರ್ಶನ ವರದಿ
ಆಶಿಸ್ ಸಾದರ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಧಾರವಾಡ 02: ಇಲ್ಲಿಯ ಮಾಳಮಡ್ಡಿ ಕೆ.ಇ.ಬೋರ್ಡ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಆಶಿಶ್ ಸಾದರ ಇತ್ತೀಚಿಗೆ ಬೆಂಗಳೂರಿನ ಡಿಎಸ್‌ಇಆರ್‌ಟಿಯಲ್ಲಿ ರಾಜ್ಯ ಮಟ್ಟದ ಸ್ತರೀಯ ಬಾಲವೈಜ್ಞಾನಿಕ್ ಪ್ರದರ್ಶಿನಿ-2025 ಪ್ರದರ್ಶನದಲ್ಲಿ ಭಾಗವಹಿಸಿ ‘ಸಾರಿಗೆ ಮತ್ತು ಸಂವಹನ’ ಎಂಬ ಥೀಮ್‌ನ ಅಡಿಯಲ್ಲಿ ಅತ್ಯುತ್ತಮ ಪ್ರದರ್ಶನ ಪ್ರಸ್ತುತಪಡಿಸಿ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಸದರಿ ವಿದ್ಯಾರ್ಥಿಗೆ, ಮಾರ್ಗದರ್ಶಿ ಶಿಕ್ಷಕಿ ಎಂಎಸ್‌ಕೋಳಿವಾಡ ಹಾಗೂ ಸಂಸ್ಥೆಯ ಮುಖ್ಯಾಪಾಧ್ಯಾಯರಿಗೆ ಡಯಟ್ ಪ್ರಾಚಾರ್ಯ ಜೆ.ಜಿ.ಸೈಯದ್, ನೋಡಲ್ ಅಧಿಕಾರಿ ಹೇಮಲತಾ ಪಿ ಅಮ್ಮಿನಬಾವಿ, ಹಿರಿಯ ಉಪನ್ಯಾಸಕರು ಮತ್ತು ಉಪನ್ಯಾಸಕರು ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ. ರಾಷ್ಟ್ರ ಮಟ್ಟದಲ್ಲೂ ಕೂಡ ಪ್ರಥಮ ಶ್ರೇಣಿಯಲ್ಲಿ ಆಯ್ಕೆಯಾಗಲಿ ಎಂದು ಶುಭ ಹಾರೈಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 