ಅಶೋಕ ದುಡಗುಂಟಿ ಅಧಿಕಾರ ಸ್ವೀಕಾರ

Ashok Dudgunti assumes power

ಉಗರಗೋಳ 02: ಸಮೀಪದ ಯಲ್ಲಮ್ಮನಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಅಶೋಕ ದುಡಗುಂಟಿ ಸೋಮವಾರ ಅಧಿಕಾರ ಸ್ವೀಕರಿಸಿದರು. 

ಅಧಿಕಾರ ಸ್ವೀಕರಿಸಿದ ನಂತರ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ದುಡಗುಂಟಿ ಅವರನ್ನು ಯಲ್ಲಮ್ಮ ದೇವಸ್ಥಾನ ಸಿಬ್ಬಂದಿ ಸನ್ಮಾನಿಸಿದರು. 

ಸವದತ್ತಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ಎಸ್ ಎಮ್ ಮುದಗಲ್ಲ್‌ ಹಾಗೂ ದೇವಸ್ಥಾನ ಸಿಬ್ಬಂದಿ ಇದ್ದರು. 

ರಾಜ್ಯದಲ್ಲೇ ಅತಿಹೆಚ್ಚಿನ ಭಕ್ತರು ಯಲ್ಲಮ್ಮನ ಸನ್ನಿಧಿಗೆ ಆಗಮಿಸುತ್ತಾರೆ. ಇಲ್ಲಿ ಹೆಚ್ಚಿನ ಮೂಲಸೌಕರ್ಯ ಸೃಷ್ಟಿಸಿ, ಭಕ್ತರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು. ಎಲ್ಲರ ಸಹಕಾರದೊಂದಿಗೆ ಗುಡ್ಡದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ದುಡಗುಂಟಿ ಹೇಳಿದರು.