ಬೆಂಗಳೂರು,ಮಾ. 28,ರಾಜ್ಯದಲ್ಲಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಇಂದು ವಿಡಿಯೋ ಸಂವಾದ ನಡೆಸಿದರು.ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸಿದ ಉಪಮುಖ್ಯಮಂತ್ರಿಗಳು, ಎರಡೂ ಜಿಲ್ಲೆಗಳಲ್ಲೂ ಕೊರೋನಾ ನಿಯಂತ್ರಣ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಲಾಕ್ ಡೌನ್ ಕ್ರಮಗಳನ್ನು ಕಠಿಣವಾಗಿ ಪಾಲಿಸುವಂತೆ ಸಾಮಾಜಿಕ ಅಂತರ ಮತ್ತು ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ಅಧಿಕಾರಿಗಳಿಗೆ ಸೂಚಿಸಿದರು. ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಯೂ ಮಾಹಿತಿ ಪಡೆದರು.
ಇನ್ನೊಂದೆಡೆ ಆರೋಗ್ಯ ಶ್ರೀರಾಮುಲು ಟ್ವೀಟ್ ಮಾಡಿ, ರಾಮನಗರ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಜಿಲ್ಲಾಡಳಿತ ಸಮರ್ಪಕ ಕ್ರಮಗಳನ್ನು ಕೈಗೊಂಡಿದೆ. ನಾಗರಿಕರು ಯಾವುದೇ ರೀತಿಯ ಒಳಗಾಗದೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು, ಮನೆಯಲ್ಲಿ ಸುರಕ್ಷಿತವಾಗಿರಬೇಕೆಂದು ವಿನಂತಿಸುತ್ತೇನೆ ಎಂದು ಮನವಿ ಮಾಡಿದ್ದಾರೆ. ಇಂದು ರಾಮನಗರದಲ್ಲಿ ಕೋವಿಡ್-19 ಸೋಂಕು ಹರಡದಂತೆ ತೆಗೆದುಕೊಂಡ ಮುಂಜಾಗೃತ ಕ್ರಮಗಳು ಪರಿಶೀಲನಾ ಸಭೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಸ್ಥಳೀಯ ಸಂಸದರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು ಎಂದು ರಾಮುಲು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.