ಏಷ್ಯನ್ ಪ್ಯಾರಾ ಅರ್ಚರಿ ಚಾಂಪಿಯನ್ಶಿಪ್: ಭಾರತದ ವಿವೇಕ್ ಚಿಕಾರಗೆ ಚಿನ್ನದ ಪದಕ
ಬ್ಯಾಂಕಾಕ್, ಅ 24: ಇಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಅರ್ಚರಿ ಚಾಂಪಿಯನ್ಶಿಪ್ ನ ಪುರುಷರ ರಿಕರ್ವ್ ಓಪನ್ ವಿಭಾಗದಲ್ಲಿ ಭಾರತದ ವಿವೇಕ್ ಚಿಕಾರ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
29ರ ಪ್ರಾಯದ ಚಿಕಾರ ಅವರು 7-1 ಅಂತರದಲ್ಲಿ ಚೀನಾದ ಸಿಜುನ್ ವಾಂಗ್ ವಿರುದ್ಧ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದರು. ಇವರ ಚಿನ್ನದ ಪದಕದ ಸಾಧನೆಗೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಸಕ್ತ ವರ್ಷದ ಆರಂಭದಲ್ಲಿ ನಡೆದಿದ್ದ ವಿಶ್ವ ಪ್ಯಾರಾ ಕ್ರೀಡಾಕೂಟದ ಪುರುಷರ ರಿಕರ್ವ್ ಓಪನ್ ನಲ್ಲಿ ವಿವೇಕ್ ಚಕಾರ ಅವರು ಒಂಬತ್ತನೇ ಸ್ಥಾನ ಪಡೆಯುವ ಮೂಲಕ 2020ರ ಟೋಕಿಯೊ ಒಲಿಂಪಿಕ್ಸ್ ಗೆ ಟಿಕೆಟ್ ಪಡೆದುಕೊಂಡಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ರಿಕರ್ವ್ ಓಪನ್ ಸ್ಫರ್ಧೆಗೆ ಒಟ್ಟು 10 ಸ್ಥಾನಗಳಿರುತ್ತವೆ. ಇದರಲ್ಲಿ ಪುರುಷ ಹಾಗೂ ಮಹಿಳೆಯರಿಗೆ ತಲಾ ಎರಡು ಸ್ಥಾನ ನೀಡಲಾಗಿರುತ್ತದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 