ಡಾಂಬರ್ ಪೇವರ್ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಸಾವು
Asphalt paver tractor overturns: Driver dies
ಲೋಕದರ್ಶನ ವರದಿ,
ಜಮಖಂಡಿ 13: ನಗರದ ಹೊರವಲಯದ ಮುಧೋಳ ರಸ್ತೆಯ ಕಟ್ಟೆಕೆರೆಯ ಬಳಿ ಡಾಂಬರ್ ಪೇವರ್ ಟ್ರ್ಯಾಕ್ಟರ್ ವಾಹನ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಧಾರುಣ ಘಟನೆ ಸಂಭವಿಸಿದೆ.
ನಗರದ ಕಟ್ಟೆಕೆರೆಯ ಹತ್ತಿರ ಡಾಂಬರ್ ಪೇವರ್ ಟ್ರ್ಯಾಕ್ಟರ್ ವಾಹನ ಜಮಖಂಡಿ ಕಡೆಯಿಂದ ಮುಧೋಳ ಕಡೆಗೆ ಹೋಗುವ ಸಮಯದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಹಳ್ಳಕ್ಕೆ ಊರುಳಿದ ಕಾರಣ ವಾಹನ ಚಾಲಕ ಪಲ್ಟಿಯಾದ ವಾಹನದ ಕೆಳಭಾಗದಲ್ಲಿ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪಿದ್ದಾನೆ.
ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಶಿರನಾಳ ಗ್ರಾಮದ ಬಂದೇನವಾಜ ಲಾಲಸಾಹೇಬ ಶೇಖ (28) ಎಂದು ಗುರುತಿಸಲಾಗಿದ್ದು. ಮುಧೋಳ ತಾಲ್ಲೂಕಿನ ಮುಗಳಖೋಡ ಗ್ರಾಮದ ರಾಜೇಸಾಹೇಬ ಜಾತಗಾರ ಅವರಿಗೆ ಸೇರಿದ ವಾಹನದ ಮೇಲೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ಭೇಟಿ ನೀಡಿ. ವಾಹನದಲ್ಲಿ ಕೆಳಭಾಗದಲ್ಲಿ ಸಿಲುಕಿಕೊಂಡು ಸಾವನ್ನಪ್ಪಿದ ಚಾಲಕನನ್ನು ಹೊರತೆಗೆಯಲು ಹರಸಾಹಸಪಟ್ಟರು.
ಸ್ಥಳಕ್ಕೆ ಜಮಖಂಡಿ ಸಿಪಿಐ ಮಲ್ಲಪ್ಪ ಮಡ್ಡಿ, ಶಹರ ಪೋಲಿಸ್ ಠಾಣೆಯ ಪಿಎಸ್‌ಐ ಅನೀಲ ಕುಂಬಾರ, ಗ್ರಾಮೀಣ ಪಿಎಸ್‌ಐ ಗಂಗಾಧರ ಪೂಜಾರಿ ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 