ಕಾಲುವೆ ಮೇಲಿನ ರಸ್ತೆ ಡಾಂಬರೀಕರಣಕ್ಕೆ ಚಾಲನೆ
Asphalting of road over the canal launched
ಪಾಲಬಾವಿ 09: ಗ್ರಾಮದಲ್ಲಿ ಏಳು ಮಕ್ಕಳ ತಾಯಿ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಯ ಡಾಂಬರೀಕರಣ ಕಾಮಗಾರಿಗೆ ಶಾಸಕ ಮಹೇಂದ್ರ ತಮ್ಮಣ್ಣವರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಪಂಚಾಯತ್ ರಾಜ್ ಇಲಾಖೆಯ ಅನುದಾನದಲ್ಲಿ 75 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು. ರಸ್ತೆ ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಿರ್ಮಿಸಬೇಕು ಎಂದು ಶಾಸಕ ಮಹೇಂದ್ರ ತಮ್ಮಣ್ಣವರ ಗುತ್ತಿಗೆದಾರರಿಗೆ ಸೂಚಿಸಿದರು. ಮುಖ್ಯ ರಸ್ತೆಯಿಂದ ಪಾಲಬಾವಿ ಗ್ರಾಮದ ಏಳು ಮಕ್ಕಳ ತಾಯಿ ದೇವಸ್ಥಾನಕ್ಕೆ ಸಂಪರ್ಕಿಸುವ ಈ ರಸ್ತೆ ಜನತಾ ಪ್ಲಾಟ್ ವಾರ್ಡ್ ನಂ.3ರ ಘಟಪ್ರಭಾ ಎಡದಂಡೆ ಕಾಲುವೆ ಸೇತುವೆ ಸಮೀಪ ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಗಿರೇಪ್ಪ ಬಳಗಾರ, ಇಲಾಹಿ ಕಾಗವಾಡ, ಪ್ರಭು ಕರೋಶಿ, ಮಹಾಲಿಂಗ ಜನವಾಡ, ಕುಡಚಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಹಾಲ್ಗುಣಿ ಸೇರಿದಂತೆ ಪಕ್ಷದ ಮುಖಂಡರು, ರೈತ ಸಂಘದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 