ಅಸ್ಸಾಂ ಉಪ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

ಗುವಾಹಟಿ, ಅ.24:    ಇದೇ 21ರಂದು ಅಸ್ಸಾಂನ ನಾಲ್ಕು ವಿಧಾನಸಭಾ  ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಎಲ್ಲಾ ಕಡೆ ಆಡಳಿತಾರೂಢ ಬಿಜೆಪಿ ಮುನ್ನಡೆಯಲ್ಲಿದೆ. ನಿಯೋಜಿತ ಎಲ್ಲಾ ಮತ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭಗೊಂಡಿದೆ. ರತಬಾರಿ ಮತ್ತು ರಂಗಪರಾ ಕ್ಷೇತ್ರಗಳಲ್ಲಿ ಮೊದಲ ಎರಡು ಸುತ್ತಿನ ಎಣಿಕೆ ಪೂರ್ಣಗೊಂಡಿದ್ದು, ಎರಡೂ ಸ್ಥಳಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಜನಿಯಾ ಮತ್ತು ಸೊನಾರಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.  ರತಾಬಾರಿ, ರಂಗಪಾರ ಮತ್ತು ಸೊನಾರಿ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ. ಮಾತ್ರವಲ್ಲ ಪ್ರತಿಪಕ್ಷ ಕಾಂಗ್ರೆಸ್ ನಿಂದ ಜಾನಿಯಾ ಕ್ಷೇತ್ರವನ್ನು ಕಸಿದುಕೊಳ್ಳುವ ಹುಮ್ಮಸ್ಸಿನಲ್ಲಿದೆ.