ದಿವ್ಯಾಂಗರಿಗೆ ನೆರವು: ಆತ್ಮಸ್ಥೈರ್ಯದಿಂದ ಮುನ್ನಡೆಯಲು ಬಸವರಾಜ ಬೊಮ್ಮಾಯಿ ಕರೆ

ದಿವ್ಯಾಂಗರಿಗೆ ನೆರವು: ಆತ್ಮಸ್ಥೈರ್ಯದಿಂದ ಮುನ್ನಡೆಯಲು ಬಸವರಾಜ ಬೊಮ್ಮಾಯಿ ಕರೆ  Assistance for the differently-abled: Basavaraj Bommai calls upon them to move forward with self-con


ಗದಗ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಹಾಗೂ ಜನಪರ ಯೋಜನೆಗಳಿಂದ ಭಾರತ ಜಾಗತಿಕ ಮಟ್ಟದಲ್ಲಿ ಅಪ್ರತಿಮ ಯಶಸ್ಸು ಸಾಧಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.  

ಗದಗ ನಗರದ ಎ.ಪಿ.ಎಂ.ಸಿ. ಯಾರ್ಡ್ನಲ್ಲಿರುವ ಶ್ರೀ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ‘ಸೇವಾ ಸಂಕಲ್ಪ’ ಅಭಿಯಾನದಡಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ‘ಸಾಮಾಜಿಕ ಅಧಿಕಾರಿತ ಶಿಬಿರ’ (ಎಡಿಐಪಿ) ಯೋಜನೆಯಡಿ ದಿವ್ಯಾಂಗರಿಗೆ ಸಾಧನ-ಸಲಕರಣೆಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  

ದೇಶದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ದಿವ್ಯಾಂಗರಿಗೆ ನೆರವಾಗುವ ಉದ್ದೇಶದಿಂದ ಇಂತಹ ಜನಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ದಿವ್ಯಾಂಗರು ತಮ್ಮ ದೈನಂದಿನ ಜೀವನದಲ್ಲಿ ಹಲವು ನ್ಯೂನತೆ ಹಾಗೂ ಸವಾಲುಗಳನ್ನು ಎದುರಿಸುತ್ತಿದ್ದರೂ, ಪ್ರತಿಯೊಬ್ಬರಲ್ಲೂ ವಿಶೇಷ ಪ್ರತಿಭೆ ಅಡಗಿದೆ ಎಂದು ಬೊಮ್ಮಾಯಿ ಹೇಳಿದರು.  

ದೇವರು ಕೆಲವೊಮ್ಮೆ ಕೆಲವು ಕೊರತೆಗಳನ್ನು ನೀಡಿದರೂ, ಅದಕ್ಕೆ ಸರಿಹೊಂದುವಂತೆ ದೊಡ್ಡ ಪ್ರತಿಭೆಯನ್ನು ನೀಡಿರುತ್ತಾನೆ. ಆತ್ಮಸ್ಥೈರ್ಯವೇ ದಿವ್ಯಾಂಗರಿಗೆ ದೊಡ್ಡ ಶಕ್ತಿ. ಆತ್ಮವಿಶ್ವಾಸದಿಂದ ಮುನ್ನಡೆದರೆ ಜೀವನದಲ್ಲಿ ಬೆಳಕು, ಪ್ರಗತಿ ಹಾಗೂ ಯಶಸ್ಸು ಕಾಣಲು ಸಾಧ್ಯ ಎಂದು ಅವರು ಹೇಳಿದರು.