ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಸ್ಯೆಗಳ ಪರಿಹಾರಕ್ಕೆ ಭರವಸೆ
Assurance given to resolve welfare issues of Scheduled Tribes
ತಾಳಿಕೋಟೆ 28: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಟಿ. ರಘುಮೂರ್ತಿ ಅವರನ್ನು ಭೇಟಿಯಾದ ಕಲ್ಯಾಣ ಕರ್ನಾಟಕ ಪ್ರದೇಶದ ವಿವಿಧ ಜಿಲ್ಲೆಗಳ ಮುಖಂಡರು, ಪರಿಶಿಷ್ಟ ವರ್ಗಗಳ ಸಮುದಾಯ ಎದುರಿಸುತ್ತಿರುವ ಹಲವು ಸಮಸ್ಯೆಗಳ ಕುರಿತು ಗಮನ ಸೆಳೆದರು. ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಸಮಸ್ಯೆಗಳನ್ನು ಆಲಿಸಿದ ಸಚಿವರು, ಪರಿಶಿಷ್ಟ ವರ್ಗಗಳ ಜನರ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಮಾಜ ವಿಭಾಗದ ಅಧ್ಯಕ್ಷ ನಂದಕುಮಾರ್ ಮಾಲಿ ಪಾಟೀಲ, ಮರೆಪ್ಪ ನಾಯಕ ಮಗದಂಪೂರ, ಶ್ರವಣಕುಮಾರ್ ನಾಯಕ, ದೇವೀಂದ್ರ್ಪ ಗೌಡ ಗೌಡಗೇರಿ, ಮಾರುತಿ ಜಮಾದಾರ, ಗುರುರಾಜ ಸುಬೇದಾರ, ರಾಜ್ಯ ನೌಕರರ ಸಂಘದ ಅಧ್ಯಕ್ಷ ಜಗದೀಶ್ ಮೂರ್ತಿ, ಜಿಲ್ಲಾ ಅಧ್ಯಕ್ಷ ಅಶೋಕ ದೊರಿಗೋಳ, ರಾಜ್ಯ ಎಸ್ಸಿ-ಎಸ್ಟಿ ನಕಲಿ ಜಾತಿ ತಡೆ ಸಮಿತಿ ವಿಜಯಪುರದ ರಘುವೀರ ನಾಯಕ, ಬಳ್ಳಾರಿಯ ಮರಿಸ್ವಾಮಿ, ಸಾಹೇಬ್ ರೆಡ್ಡಿ, ಯಲ್ಲಾಲಿಂಗ ಠಾಣೆಕೇದಾರ,
ತುಮಕೂರಿನ ಶ್ರೀಧರ ನಾಯಕ, ಯಲ್ಲಪ್ಪ ನಾಯಕ, ಬಸವರಾಜ ದೊಡ್ಡಮನಿ, ಸಂತೋಷ್ ಅವಾರಾಳ, ಮಾಂತೇಶ ದೊರೆ, ಮರಿಸ್ವಾಮಿ, ಭಾಗು ದೊರೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಮಾಜದ ಹಿರಿಯ ಮುಖಂಡರು ಹಾಗೂ ಯುವ ನಾಯಕರು ಉಪಸ್ಥಿತರಿದ್ದರು. ಸಚಿವರನ್ನು ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸಿದಕ್ಕಾಗಿ ಮುಖಂಡರು ಹಾಗೂ ಸಮಾಜದವರು ಕೃತಜ್ಞತೆ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 