ಅಸ್ತಮಾ ಕುರಿತು ಜನಜಾಗೃತಿ ಮೂಡಿಸುವ ಕಾರ್ಯಕ್ರಮ
Asthma awareness program
ಬೆಳಗಾವಿ 12: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಸಮುದಾಯ ಬಾನುಲಿ ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ನೇರ ಫೋನ್-ಇನ್ ಪ್ರಸಾರ ಕಾರ್ಯಕ್ರಮ ನಡೆಸಲಾಹಿತು.
ಇಂದು ಬೆಳಗ್ಗೆ 10 ರಿಂದ 11 ಗಂಟೆ ವರೆಗೆ ನಡೆದ ಕಾರ್ಯಕ್ರಮದಲ್ಲಿ ಅಸ್ತಮಾ ಕುರಿತು ಪ್ರಶ್ನೋತ್ತರ ಮೂಲಕ ಜನಜಾಗೃತಿ ಮೂಡಿಸಲಾಹಿತು. ಕಾರ್ಯಕ್ರಮದಲ್ಲಿ ಕೆಎಲ್‌ಇ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕರು ಮತ್ತು ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ವೈದ್ಯರಾದ ಡಾ. ಜ್ಯೋತಿ ಹಟ್ಟಿಹೋಳಿ ಅವರು ಭಾಗವಹಿಸಿ ಅಸ್ತಮಾ ಕುರಿತು ಜಾಗೃತಿ ಮೂಡಿಸಿದರು.
ಮನುಷ್ಯನ ಎದೆಯಲ್ಲಿ ಬಿಗಿತ, ಉಸಿರಾಡಲು ಕಷ್ಟವಾಗುವುದು, ಪದೆ ಪದೆ ಕೆಮ್ಮು ಮತ್ತು ಉಸಿರುಗಟ್ಟಿದಂತೆ ಅನಿಸುವುದು ಇವೆಲ್ಲಾ ಅಸ್ತಮಾ ಕಾಯಿಲೆಯ ಸಾಮಾನ್ಯ ಲಕ್ಷಣಗಳು, ಪ್ರಾರಂಭಿಕ ಹಂತದಲ್ಲಿ ಮಾರಣಾಂತಿಕವಲ್ಲದಿದ್ದರೂ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದಿದ್ದರೆ ಇದು ಜೀವಕ್ಕೆ ಮಾರಕವಾಗಬಹುದು, ಅಸ್ತಮಾವನ್ನು ಪೂರ್ತಿಯಾಗಿ ಗುಣಪಡಿಸಲು ಸಾಧ್ಯವಿಲ್ಲ ಆದರೆ ಅದರ ಪರಿಣಾಮ ಮತ್ತು ಲಕ್ಷಣಗಳನ್ನು ಕಡಿಮೆಗೊಳಿಸಬಹುದು, ಆದ್ದರಿಂದ ಅಸ್ತಮಾ ಬಗ್ಗೆ ನಿರ್ಲಕ್ಷಿಸಬೇಡಿ ಚಿಕಿತ್ಸೆ ಪಡೆಯುವುದು ಮುಖ್ಯ ಎಂದು ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸಿದರು ಮತ್ತು ಕೇಳುಗರ ಅಸ್ತಮಾ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್ ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 