ಕನಿಷ್ಠ ತಲಾ ಒಂದು ಲಕ್ಷ ರೂ. ದೇಣಿಗೆ ನೀಡುವಂತೆ ಶಾಸಕರು, ಸಂಸದರಿಗೆ ಸಿದ್ದರಾಮಯ್ಯ ಮನವಿ
ಬೆಂಗಳೂರು,
ಏ.1 , ಕೆಪಿಸಿಸಿ ಆರಂಭಿಸಿರುವ ಕೊರೊನ ಪರಿಹಾರ ನಿಧಿಗೆ ವೈಯಕ್ತಿಕವಾಗಿ ತಲಾ
ಕನಿಷ್ಠ ಒಂದು ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡುವಂತೆ ಕಾಂಗ್ರೆಸ್ ಪಕ್ಷದ ಶಾಸಕರು,
ಸಂಸದರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಕೊರೊನ
ವೈರಸ್ ರಾಜ್ಯದ ಜನತೆಯನ್ನು ತೀವ್ರ ಸಂಕಷ್ಟಕ್ಕೀಡು ಮಾಡಿದೆ. ಇದರಿಂದಾಗಿ ದುಡಿಯುವ
ವರ್ಗಕ್ಕೆ ಉದ್ಯೋಗಗಳಿಲ್ಲದೆ ಆಹಾರ, ನೀರು, ಔಷಧಿಗಳಿಗೆ ಪರದಾಡಬೇಕಾದ ಪರಿಸ್ಥಿತಿ
ಉಂಟಾಗಿದೆ. ಮೊದಲೇ ಪ್ರವಾಹದಿಂದ ನಲುಗಿದ್ದ ನಾಡಿನ ರೈತ,ಕೂಲಿ ಕಾರ್ಮಿಕರನ್ನೂ ಸಹ ಈ
ವೈರಸ್ ಕಂಗೆಡುವಂತೆ ಮಾಡಿದೆ ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ
ಕೇಂದ್ರ-ರಾಜ್ಯ ಸರ್ಕಾರಗಳೆರಡೂ ಸನ್ನಿವೇಶವನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿತ್ತು.
ಆದರೆ ಎರಡೂ ಸರ್ಕಾರಗಳಿಂದ ಪರಿಹಾರ ಕಾರ್ಯ ಸೂಕ್ತವಾಗಿ ನಡೆಯುತ್ತಿಲ್ಲ. ಈ
ಸಂದರ್ಭದಲ್ಲಿ ನಾವೆಲ್ಲರೂ ಜನ ಕಂಗೆಡದಂತೆ ಅವರ ಜೊತೆ ನಿಂತು ಪರಿಣಾಮಕಾರಿಯಾಗಿ ಕೆಲಸ
ಮಾಡಬೇಕಾಗಿದೆ. ಆದ್ದರಿಂದ ನಮ್ಮ ಪಕ್ಷದ ಶಾಸಕರು, ಸಂಸದರು ವೈಯಕ್ತಕವಾಗಿ ತಲಾ ಕನಿಷ್ಠ
ಒಂದು ಲಕ್ಷ ರೂ. ಗಳ ದೇಣಿಗೆ ನೀಡಬೇಕು ಹಾಗೂ ತಮ್ಮ ತಮ್ಮ ಕ್ಷೇತ್ರಗಳಲ್ಲಿದ್ದುಕೊಂಡು
ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ಶಾಸಕರಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 