ತಾಲೂಕಾ ಮಟ್ಟದಲ್ಲಿ ಪ್ರತಿ ಮಾಹೆ ವಿಕಲಚೇತನರ ಕುಂದುಕೊರತೆ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಿ: ಜಿಲ್ಲಾಧಿಕಾರಿ ಟಿ.ಭೂಬಾಲನ್

At the taluka level, meet the grievances of the differently abled every month and provide solutions

ವಿಜಯಪುರ, ಫೆ.15: ಜಿಲ್ಲೆಯ ಎಲ್ಲಾ ತಾಲೂಕಾ ಮಟ್ಟದಲ್ಲಿ ವಿಕಲಚೇತನರ ಕುಂದುಕೊರತೆ ಸಭೆ ನಡೆಸಿ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.  

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ 2016ರ ಕಾಯ್ದೆ ಅನ್ವಯ ಪುನಶ್ವೇತನ ಹಕ್ಕುಗಳ ರಕ್ಷಣೆ ಮತ್ತು ಅಭಿವೃದ್ಧಿ ಹಾಗೂ ವಿಕಲಚೇತನರ ವಿವಿಧ ವಿಷಯಗಳು ಹಾಗೂ ವಿಕಲಚೇತನರ ಕುಂದು-ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.  

ಸರ್ಕಾರವು ವಿಕಲಚೇತನರ ಉನ್ನತಿಗಾಗಿ ಹಲವು ಯೋನಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಯ ಲಾಭ ಅರ್ಹ ವಿಕಲಚೇತನರಿಗೆ ದೊರಕಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಅರ್ಹರು ಸಹ ಈ ಯೋಜನೆಗಳ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದರು.  

ವಿಕಲಚೇತನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಅವರಿಗೆ ಮೀಸಲಿರಿಟ್ಟಿರುವ ಶೇ.5ಅ ಹಣವನ್ನು ಸರ್ಕಾರದ ಮಾರ್ಗ ಸೂಚಿಯಂತೆ ಕ್ರಮವಹಿಸಿ,ವಿಕಲಚೇತನರ ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. 2016ರ ಕಾಯ್ದೆಯಡಿ ಬರುವ ವಿಕಲಚೇತನರ ಕಾಯ್ದೆ ಕಾನೂನು ಕುರಿತಾಗಿ ಇರುವ ಜಾಗೃತಿಗಾಗಿ ನಾಮಫಲಕ ಗಳನ್ನು ಅಳವಡಿಸಬೇಕು.  

ವಿಕಲಚೇತನರು ಆರ್ಥಿಕವಾಗಿ ಸಬಲರಾಗಲು ಸರ್ಕಾರದ ಸವಲತ್ತುಗಳ ಮಾಹಿತಿ ಒದಗಿಸಿ, ಅವರ ಸ್ವಾವಲಂಬಿ ಜೀವನ ನಡೆಸಲು ಸಹಾಯ ಸಹಕಾರ ಒದಗಿಸಬೇಕು. ವಿಕಲಚೇತನರಿಗೆ ಸರ್ಕಾರಿ ಕಛೇರಿ ಆಸ್ಪತ್ರೆ, ಶಾಲಾ-ಕಾಲೇಜು, ಬ್ಯಾಂಕ್‌ಗಳಲ್ಲಿ ರಾ​‍್ಯಂಪ್ ಮತ್ತು ರೀಲಿಂಗ್ ಅಳವಡಿಸುವ ಕ್ರಮ ಕೈಗೊಳ್ಳಬೇಕೆಂದು   ಅಧಿಕಾರಿಗಳಿಗೆ ಸೂಚಿಸಿದರು. ಕ್ರೀಡಾ ಕ್ಷೇತ್ರದಲ್ಲಿ ಆಸಕ್ತಿ ಇರುವ ವಿಕಲಚೇತನರನ್ನು ಗುರುತಿಸಿ, ಅವರಿಗೆ ಪ್ರೋತ್ಸಾಹಿಸಬೇಕು ಎಂದರು. ಅರ್ಹ ವಿಕಲಚೇತನರು ಸಾಲಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದಾಗ ಅರ್ಜಿಗಳನ್ನು ಪರೀಶೀಲಿಸಿ ಸಕಾಲದಲ್ಲಿ ಸಾಲ ಸೌಲಭ್ಯ ಒದಗಿಸಬೇಕು. 

ಯುಡಿಐಡಿ ಕಾರ್ಡ ವಿತರಣೆ, ಹೊರಗುತ್ತಿಗೆ ಆಧಾರದ ಮೇಲೆ ವಿಕಲಚೇತನರಿಗೆ ಉದ್ಯೊಗಾಅವಕಾಶ, ಸ್ಪೋರ್ಟ್ಸ್‌ ವ್ಹೀಲ್ ಚೇರ​‍್ಸ‌, ಗೃಹ ನಿರ್ಮಾಣ, ಟಿಸಿ ಅಳವಡಿಸುವ, ಬಸ್ ನಲ್ಲಿ ವಿಕಲಚೇತನರ ಆಸನ, ಬಸ್ ನಿಲ್ದಾಣಗಳಲ್ಲಿ ವಿಕಲಚೇತನ ಸ್ನೇಹಿ ಸೌಚಾಲಯ ನಿರ್ಮಿಸುವ ವ್ಯವಸ್ಥೆ ಮುಂತಾದ ಸೌಲಭ್ಯ ಒದಗಿಸುವದು ಸೇರಿದಂತೆ ವಿಕಲಚೇತನರ ಕುಂದು ಕೊರತೆ ಆಲಿಸಿದ ಜಿಲ್ಲಾಧಿಕಾರಿಗಳು ವಿಕಲಚೇತನರಿಗೆ ಪರಿಹಾರ ಕಲ್ಪಸಿಕೊಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. 

ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ವಿಕಲಚೇತನರು ನಿರ್ವಹಿಸುವ ಉದ್ಯೋಗ ನೀಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ವಿಕಲಚೇತನರು ಜಾಬ್ ಕಾರ್ಡ ಮಾಡಿಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯತ ಮಟ್ಟದಲ್ಲಿ ವಿಕಲಚೇತನರಿಗಾಗಿ ಇರುವ ಯೋಜನೆಗಳ ಸಮರ​‍್ಕ ಅನುಷ್ಟಾನಕ್ಕಾಗಿ   ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.  

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮ್ ಬಾಬಾ ಮುದ್ದೇಬಿಹಾಳ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಸವಿತಾ ಕಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಕುಮಾರ ಗುಣಾರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಎಲ್‌. ರೂಪಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸೇವಾ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.