ಅಟಲ್‌ ಬಿಹಾರಿ ವಾಜಪೇಯಿ ಜನ್ಮದಿನ: ರಾಷ್ಟ್ರಪತಿ, ಪ್ರಧಾನಿ, ಗೃಹ ಹಾಗೂ ರಕ್ಷಣಾ ಸಚಿವರಿಂದ ಗೌರವ ನಮನ

ನವದೆಹಲಿ, ಡಿ.25, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಅಂಗವಾಗಿ ಇಲ್ಲಿರುವ ಅವರ ಸ್ಮಾರಕ "ಸದೈವ್‌ ಅಟಲ್‌"ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಬೆಳಗ್ಗೆ ಗೌರವ ನಮನ ಸಲ್ಲಿಸಿದರು.ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಬಿಜೆಪಿ ಹಿರಿಯ ನಾಯಕರು ಅಟಲ್‌ ಅವರ 95ನೇ ಜನ್ಮ ದಿನದ ಪ್ರಯುಕ್ತ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.ಇಂದು ಬೆಳಿಗ್ಗೆ 'ಸದೈವ್ ಅಟಲ್' ನಲ್ಲಿ ಪ್ರಾರ್ಥನಾ ಸಭೆಯನ್ನು ಸಹ ಆಯೋಜಿಸಲಾಗಿತ್ತು, ಅಲ್ಲಿ ಧಾರ್ಮಿಕ ಸ್ತೋತ್ರಗಳು ಮತ್ತು ಪ್ರಾರ್ಥನೆಗಳ ನಡುವೆ ಮಾಜಿ ಪ್ರಧಾನ ಮಂತ್ರಿಯನ್ನು ಹಿರಿಯ ನಾಯಕರು ಸ್ಮರಿಸಿದರು.ಎಲ್ಲರ ಹೃದಯದಲ್ಲಿ ನೆಲೆಸಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ನಮನ ಸಲ್ಲಿಸುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.ಇಂದು ಬೆಳಿಗ್ಗೆ ಪ್ರಧಾನಿ ಮೋದಿ ಟ್ವೀಟ್‌ ಮಾಡಿ, ಪಂಡಿತ್‌ ಮದನ್ ಮೋಹನ್ ಮಾಳವಿಯಾ ಹಾಗೂ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ನಮನ ಸಲ್ಲಿಸಿದ್ದಾರೆ.ಶಿಕ್ಷಣ ಸುಧಾರಣೆಗಳಿಗಾಗಿ ಪಂಡಿತ್ ಮಾಳವಿಯಾ ಅವರ ಕಾರ್ಯಗಳು ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿನ ಕೊಡುಗೆಗಳನ್ನು ಪ್ರಧಾನಿ ತಮ್ಮ ಸಂದೇಶದಲ್ಲಿ ನೆನಪಿಸಿಕೊಂಡಿದ್ದಾರೆ.ರಾಷ್ಟ್ರದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಅಟಲ್ ಬಿಹಾರಿ ವಾಜಪೇಯಿ ಜಿ ಅವರ ಹೆಸರಿನಲ್ಲಿ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ.