ಪಂಚಭೂತಗಳಲ್ಲಿ ಅಟಲ್ ಲೀನ ದತ್ತು ಪುತ್ರಿ ನಮಿತಾ ಭಟ್ಟಾಚಾರ್ಯರಿಂದ ಚಿತೆಗೆ ಅಗ್ನಿಸ್ಪರ್ಶ
ನವದೆಹಲಿ 17: ಭಾರತ ಕಂಡ ಮಹಾನ್ ಮುತ್ಸದ್ಧಿ, ಹಿರಿಯ ಚೇತನ, ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾಥರ್ಿವ ಶರೀರಕ್ಕೆ ಶುಕ್ರವಾರ ಸಂಜೆ ಸಕಲ ಸಕರ್ಾರಿ ಗೌರವಗಳನ್ನು ಸಲ್ಲಿಸಿದ ಬಳಿಕ ದತ್ತುಪುತ್ರಿ ನಮಿತಾ ಭಟ್ಟಾಚಾರ್ಯ ಅವರು ಯುಮುನಾ ನದಿ ದಡದಲ್ಲಿರುವ ರಾಷ್ಟ್ರೀಯ ಏಕತಾ ಸ್ಥಳದಲ್ಲಿ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯಸಂಸ್ಕಾರ ನೆರವೇರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಅಮಿತ್ ಶಾ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ, ಎಚ್.ಡಿ.ದೇವೇಗೌಡ ಸೇರಿದಂತೆ ಅಫ್ಘಾನಿಸ್ತಾನ, ಶ್ರೀಲಂಕಾ, ನೇಪಾಳ, ಪಾಕಿಸ್ತಾನ, ಭೂತಾನ್, ಮಾಲ್ಡೀವ್ಸ್, ಏಳು ದೇಶಗಳ ನಿಯೋಗಿಗಳು ಅಂತಿಮ ನಮನ ಸಲ್ಲಿಸಿದ್ದರು.
ಬಳಿಕ ಭೂ, ನೌಕಾ ಹಾಗೂ ವಾಯುಪಡೆಯ ಸೇನಾಧಿಕಾರಿಗಳು ಸಕರ್ಾರಿ ಗೌರವಾರ್ಥಕವಾಗಿ ಕುಶಾಲತೋಪು ಹಾರಿಸಿದರು. ವೈದಿಕ ಸಂಪ್ರದಾಯದಂತೆ ವಿಧಿವಿಧಾನಗಳನ್ನು ನೆರವೇರಿಸಿದ ನಂತರ ದತ್ತು ಪುತ್ರಿ ನಮಿತಾ ಅವರು ಕುಟುಂಬಸ್ಥರು, ಗಣ್ಯರ ಸಮ್ಮುಖದಲ್ಲಿ ಅಟಲ್ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ವೇಳೆ ಮೊಮ್ಮಗಳು ನಿಹಾರಿಕಾ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.
ಭಾರತ ಕಂಡ ಶ್ರೇಷ್ಠ ರಾಜಕಾರಣಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾಥರ್ಿವ ಶರೀರವನ್ನು ಹೂವಿನಿಂದ ಅಲಂಕೃತ ವಾಹನದ ಮೂಲಕ ಸುಮಾರು ನಾಲ್ಕು ಕಿಮೀ ದೂರದಲ್ಲಿರುವ ರಾಷ್ಟ್ರೀಯ ಏಕತಾ ಸ್ಥಳದವರೆಗೆ ಮೆರವಣಿಗೆಯಲ್ಲಿ ತರಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ದತ್ತು ಪುತ್ರಿ ನಮಿತಾ ಭಟ್ಟಾಚಾರ್ಯ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ವಿವಿಧ ದೇಶಗಳ ಗಣ್ಯರು ನಡೆದು ಹೋಗುವ ಮೂಲಕ ಗೌರವ ಸಲ್ಲಿಸಿದ್ದರು.
ಮೆರವಣಿಗೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು. ಭಾರೀ ಪ್ರಮಾಣದ ಪೊಲೀಸರು ಹಾಗು ಅರೆಸೇನಾಪಡೆಯ ಯೋಧರು ಇಡೀ ಮೆರವಣಿಗೆಯಲ್ಲಿ ಸಾರ್ವಜನಿಕರ ಜೊತೆ ಸಾಗಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 