ಅಥಣಿ ಅಭಿವೃದ್ಧಿಯತ್ತ ಸಾಗುತ್ತಿದೆ: ಐನಾಪೂರ

ಅಥಣಿ ಅಭಿವೃದ್ಧಿಯತ್ತ ಸಾಗುತ್ತಿದೆ: ಐನಾಪೂರ  Athani is moving towards development: Ainapur


ಅಥಣಿ 15: ಸಚಿವ ಲಕ್ಷ್ಮಣ ಸವದಿ ಅವರ ಪ್ರಯತ್ನದಿಂದ ಅಥಣಿ ಮತಕ್ಷೇತ್ರ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಬಳವಾಡ ಗ್ರಾಮದ  ಬೀರೇಶ್ವರ ದೇವಸ್ಥಾನ ಕಮಿಟಿ ಅಧ್ಯಕ್ಷ ಹಾಗೂ ಹಾಲೂತ ಸಮಾಜದ ತಾಲೂಕು ಉಪಾಧ್ಯಕ್ಷ ನಿಂಗಪ್ಪ ಐನಾಪೂರ ಹೇಳಿದರು. ಬಳವಾಡ ಗ್ರಾಮದಲ್ಲಿ ಬೀರೇಶ್ವರ ದೇವಸ್ಥಾನದ ಅಡಿಗಲ್ಲು ಸಮಾರಂಭದಲ್ಲಿ ಮಾತನಾಡಿದ ಅವರು, ಸಚಿವ ಲಕ್ಷ್ಮಣ ಸವದಿ ಅವರು ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ತಂದು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅವರ ಪುತ್ರ ಹಾಗೂ ಕಾಂಗ್ರೆಸ್ ಯುವ ನಾಯಕ ಚಿದಾನಂದ ಸವದಿ ಅವರೂ ಕ್ಷೇತ್ರದಾದ್ಯಂತ ಸಂಚರಿಸಿ ಅಭಿವೃದ್ಧಿಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು. ಸಚಿವ ಲಕ್ಷ್ಮಣ ಸವದಿ ಅವರಿಗೆ ಮತ್ತೆ ಸಹಕಾರ ಖಾತೆ ದೊರೆತಿರುವುದು ಸಂತಸ ತಂದಿದೆ. ಅವರ ಮಾರ್ಗದರ್ಶನದಲ್ಲಿ ಪಿಕೆಪಿಎಸ್ ಸಂಘಗಳು ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಸಂಬಾಜಿ ಐನಾಪೂರ, ಅಪ್ಪು ನೇಮಗೌಡ, ಮಹಾದೇವ ಪಾಟೀಲ, ಭೂಪಾಲ ಗಾವಡೆ, ಮಲ್ಲಿಕಾರ್ಜುನ ಹರೋಲಿ, ಬಸಣ್ಣ ಸವದಿ, ಸದಾಶಿವ ಐನಾಪೂರ, ರಸೂಲ ನದಾಪ್, ರಕ್ಬರಸಾಬ ನದಾಪ್ ಸೇರಿದಂತೆ ದೇವಸ್ಥಾನ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.