ಬಳ್ಳಿಗೇರಿ ಗ್ರಾಮದ ಹೊರವಲಯದಲ್ಲಿರುವ ಲಾಡ್ಜ್ ಒಂದರ ಮೇಲೆ ಅಥಣಿ ಪೊಲೀಸರು ಅನೀರೀಕ್ಷಿತ ದಾಳಿ
Athani police conduct a surprise raid on a lodge on the outskirts of Balligeri village
ಸಂಬರಗಿ : ಗಡಿಭಾಗದಲ್ಲಿರುವ ಬಳ್ಳಿಗೇರಿ ಗ್ರಾಮದ ಹೊರವಲಯದಲ್ಲಿರುವ ಲಾಡ್ಜ್ ಒಂದರ ಮೇಲೆ ಅಥಣಿ ಪೊಲೀಸರು ಅನೀರೀಕ್ಷಿತ ದಾಳಿ ನಡೆಸಿ, ವೇಶ್ಯಾವಾಟಿಕೆ ದಂಧೆಯನ್ನು ಪತ್ತೆಹಚ್ಚಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಲಾಡ್ಜ್ ಮಾಲೀಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.ಬಳ್ಳಿಗೇರಿ ಗ್ರಾಮದ ವ್ಯಾಪ್ತಿಯಲ್ಲಿರುವ ಪ್ರಶಾಂತ ಹೋಟೆಲ್ ಮತ್ತು ಲಾಡ್ಜ್'*ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.
ಈ ಹಿನ್ನೆಲೆಯಲ್ಲಿ ದಿನಾಂಕ 24-04-2026ರಂದು ಅಥಣಿ ಪೊಲೀಸ್ ವೃತ್ತ ನೀರೀಕ್ಷಕರಾದ ಸಂತೋಷ್ ಡಿ. ಹಳ್ಳೂರ ಅವರ ನೇತೃತ್ವದ ತಂಡವು ಪಂಚರೊಂದಿಗೆ ಲಾಡ್ಜ್ ಮೇಲೆ ದಾಳಿ ನಡೆಸಿತು.ದಾಳಿಯ ವೇಳೆ ಒಬ್ಬ ಮಹಿಳೆಯನ್ನು ಈ ಜಾಲದಿಂದ ರಕ್ಷಿಸಲಾಗಿದ್ದು, ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತ ಆರೋಪಿಗಳು:ಸರದಾರ ಭಗವಂತ ಕಾಂಬಳೆ (ಲಾಡ್ಜ್ ಮಾಲೀಕ, ಸಾಽಽ ಬಳ್ಳಿಗೇರಿ), ಪ್ರವೀಣ ಬಸವರಾಜ ಮಲ್ದಾರಿ ಚಡಚಣ,ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಅಥಣಿ ವೃತ್ತ ನೀರೀಕ್ಷಕ ಸಂತೋಷ್ ಹಳ್ಳೂರ ಅವರೊಂದಿಗೆ ಪ್ರೊಬೇಷನರಿ ಪಿಎಸ್‌ಐ ಆರತಿ ತೇಲಿ, ಸಿಬ್ಬಂದಿಗಳಾದ ಬಿ.ಆರ್. ಪಾಟೀಲ, ಬಿ.ವೈ. ಮನ್ನಾಪೂರ, ಎಸ್.ಬಿ. ಖೋತ ಹಾಗೂ ಅಂಗನವಾಡಿ ಶಿಕ್ಷಕಿ ಮೀನಾಕ್ಷಿ ಹನಮಂತ ಮುಡಸಿ ಭಾಗವಹಿಸಿದ್ದರು. ಈ ಕುರಿತು ಅಥಣಿ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಅಥಣಿ ಠಾಣೆಯಲ್ಲಿ ಗುನ್ನಾ ನಂಬರ್ 323/2026 ರಂತೆ ಅಕ್ರಮ ಮಾನವ ಸಾಗಾಣಿಕೆ ತಡೆ ಕಾಯ್ದೆ ಅಡಿಯಲ್ಲಿ ಮೊಕದ್ದಮೆ ಹೂಡಲಾಗಿದ್ದು, ತನಿಖೆ ಮುಂದುವರಿದಿದೆ,
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 