ಅಥರ್ಗಾ ತಾಂಬಾ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ:ಡಾ ಕನ್ನೂರ ಬೇಟಿ
Atharga Tamba SSLC examination center: Dr. Kannur Beti
ಲೋಕದರ್ಶನ ವರದಿ
ಇಂಡಿ 27: ತಾಲ್ಲೂಕಿನ ಅಥರ್ಗಾ ತಾಂಬಾ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಯುಕ್ತ ಪರೀಕ್ಷಾ ಕೇಂದ್ರಗಳು ಮತ್ತು ವೆಬ್ ಕಾಸ್ಟಿಂಗ್ ಕೇಂದ್ರಗಳ ಸೂಕ್ಷ್ಮ ಪರೀಶೀಲನೆ ಮಾಡಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದ ಸಂಚಾರಿ ಜಾಗೃತ ದಳದ ಮುಖ್ಯಸ್ಥರು ಮತ್ತು ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ ಭೀಮಾಶಂಕರ ಕನ್ನೂರ ಅವರ ಬೇಟಿ ಪ್ರೇರಣಾದಾಯಕವಾಗಿದೆ.ಎಸ್ ಎಸ್ ಎಲ್ ಸಿ ಪರೀಕ್ಷೆ ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂಡಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಡಾ ಭೀಮಾಶಂಕರ ಕನ್ನೂರ ಅವರು ಇಂಡಿ ತಾಲೂಕಿನ ಆರ್ ಎಮ್ ಬಿರಾದಾರ ಸಂಯುಕ್ತ ಪದವಿ ಪೂರ್ವ ಕಾಲೇಜು ಮಾಧ್ಯಮಿಕ ವಿಭಾಗ ಅಥರ್ಗಾ , ಎಸ್. ಎಸ್. ಪ. ಪೂ. ಕಾಲೇಜು ತಾಂಬಾ ಮತ್ತು ಸರಕಾರಿ ಪ್ರೌಢ ಶಾಲೆ ತಾಂಬಾ ಶಾಲೆಗಳಿಗೆ ಬೇಟಿ ನೀಡಿ ಪರೀಕ್ಷಾ ವ್ಯವಸ್ಥೆಯ ಸಮಗ್ರ ಪರೀಶೀಲನೆ ನಡೆಸಿದರು.
ಮೊದಲಿಗೆ ಪರೀಕ್ಷಾರ್ಥಿಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಎಲ್ಲಾ ವ್ಯವಸ್ಥೆಗಳು ಸಮರ್ಕವಾಗಿ ಇರುವುದನ್ನು ಖಚಿತಪಡಿಸಿಕೊಂಡರು.ತದನಂತರ ಪರೀಕ್ಷಾ ಕೊಠಡಿಗಳಲ್ಲಿ ನಡೆಯುತ್ತಿರುವ ಪ್ರಕ್ರಿಯೆಯನ್ನು ನೇರವಾಗಿ ವೀಕ್ಷಿಸಿ, ವಿದ್ಯಾರ್ಥಿಗಳು ಯಾವುದೇ ಒತ್ತಡವಿಲ್ಲದೆ ಸಮಾಧಾನದಿಂದ ಪರೀಕ್ಷೆ ಬರೆಯುತ್ತಿರುವುದನ್ನು ಗಮನಿಸಿದರು. ಬಳಿಕ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳು ಭದ್ರತಾ ವ್ಯವಸ್ಥೆಗಳು ಪ್ರಶ್ನೆಪತ್ರಿಕೆ ವಿತರಣೆ ಕ್ರಮ ಪರೀಕ್ಷಾ ಮೇಲ್ವಿಚಾರಣೆ ಪ್ರಥಮ ಚಿಕಿತ್ಸಾ ವ್ಯವಸ್ಥೆ ಹಾಗೂ ಕುಡಿಯುವ ನೀರು, ಸೇರಿದಂತೆ ಪ್ರತಿಯೊಂದು ಹಂತವನ್ನೂ ಸೂಕ್ಷ್ಮವಾಗಿ ಪರೀಶೀಲಿಸಿದರು. ಪರೀಕ್ಷಾ ಮೇಲ್ವಿಚಾರಕರು ತಮ್ಮ ಕರ್ತವ್ಯವನ್ನು ಸಮರ್ಕವಾಗಿ ನಿರ್ವಹಿಸುತ್ತಿರುವುದನ್ನು ಪರೀಶೀಲಿಸಿ, ಯಾವುದೇ ಸಮಸ್ಯೆ ಆಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲು ಸೂಚಿಸಿದರು.
ಇದೇ ವೇಳೆ ಭದ್ರತಾ ವ್ಯವಸ್ಥೆಗಳನ್ನೂ ಪರೀಶೀಲಿಸಿದ ಅವರು, ಪೊಲೀಸ್ ಸಿಬ್ಬಂದಿಯ ನಿಯೋಜನೆ, ಪ್ರವೇಶ ದ್ವಾರಗಳಲ್ಲಿ ಪರೀಶೀಲನೆ ಕ್ರಮಗಳು ಹಾಗೂ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ತಡೆ ನೀಡುವ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.ನಂತರ ಪರೀಕ್ಷೆಗಳ ಮೇಲ್ವಿಚಾರಣೆಗಾಗಿ ಶಾಲೆಯಲ್ಲಿ ಸ್ಥಾಪಿಸಲಾಗಿರುವ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ವಿವಿಧ ಪರೀಕ್ಷಾ ಕೊಠಡಿಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಪ್ರಕ್ರಿಯೆಯನ್ನು ಲೈವ್ ಪ್ರಸಾರದ ಮೂಲಕ ವೀಕ್ಷಿಸಿ, ಪ್ರತಿಯೊಂದು ಕೊಠಡಿಯಲ್ಲಿಯೂ ಶಿಸ್ತು ಮತ್ತು ನಿಯಮ ಪಾಲನೆಯು ಸಮರ್ಕವಾಗಿ ನಡೆಯುತ್ತಿರುವುದನ್ನು ಪರೀಶೀಲಿಸಿದರು. ಈ ಸಂದರ್ಭದಲ್ಲಿ ಎಚ್ ಕೆ ಮಲಗೊಂಡ ಜಾಗೃತಿ ದಳದ ಸದಸ್ಯರು ಮತ್ತು ತಾಲೂಕ ದೈಹಿಕ ಶಿಕ್ಷಣ ಪರೀವೀಕ್ಷಕರು ಇಂಡಿ, ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಅಭಿಕ್ಷಕರು, ವೆಬ್ ಕಾಸ್ಟಿಂಗ್ ಸಹಾಯಕರು , ಪರೀಕ್ಷಾ ಕೊಠಡಿಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿಗಳು, ಆರೋಗ್ಯ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿಯವರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 