ಅತೀಕ್ ಅಹ್ಮದ್ ಅವರ ಕಿರಿಯ ಪುತ್ರ ಝಾನ್ಸಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವು
Atiq Ahmed’s Youngest Son Dies in Road Accident in Jhansi
ಝಾನ್ಸಿ, ಆ. 6: ಮೃತ ಮಾಫಿಯಾ ಡಾನ್ ಅತೀಕ್ ಅಹ್ಮದ್ ಅವರ ಕಿರಿಯ ಪುತ್ರ 21 ವರ್ಷದ ಅಬಾನ್ ಅಹ್ಮದ್ ಅವರು ಗುರುವಾರ ಝಾನ್ಸಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಜೈಲಿನಲ್ಲಿರುವ ತಮ್ಮ ಅಣ್ಣ ಅಲಿ ಅಹ್ಮದ್ ಅವರನ್ನು ಭೇಟಿ ಮಾಡಲು ಅಬಾನ್ ಅಹ್ಮದ್ ಅವರು ತೆರಳುತ್ತಿದ್ದ ವೇಳೆ ಝಾನ್ಸಿ-ಕಾನ್ಪುರ ಹೆದ್ದಾರಿಯ ಪೂಂಚ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
ಮೂಲಗಳ ಪ್ರಕಾರ, ಬೆಳಗ್ಗೆ ಸುಮಾರು 10.30ರ ವೇಳೆಗೆ ಪ್ರಯಾಗ್‌ರಾಜ್‌ನಿಂದ ಝಾನ್ಸಿ ಕಡೆಗೆ ತೆರಳುತ್ತಿದ್ದ ಕ್ರೆಟಾ ಕಾರು ಖಿಲ್ಲಿ ಗ್ರಾಮದ ಸಮೀಪ ತಲುಪಿದಾಗ ಏಕಾಏಕಿ ಪ್ರಾಣಿಯೊಂದು ರಸ್ತೆಗೆ ಬಂದಿದೆ. ಅದನ್ನು ತಪ್ಪಿಸಲು ಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಅಬಾನ್ ಅಹ್ಮದ್ ಮತ್ತು ಅವರ ಸ್ನೇಹಿತ ಸೋನು ಖಾನ್ ಅವರಿಗೆ ಗಂಭೀರ ತಲೆ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪೊಲೀಸರು ಕಾರಿನಲ್ಲಿದ್ದ ಉಳಿದ ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಅಬಾನ್ ಅಹ್ಮದ್ ಮತ್ತು ಸೋನು ಖಾನ್ ಮೃತಪಟ್ಟಿರುವುದಾಗಿ ಘೋಷಿಸಿದರು.
ಗಾಯಗೊಂಡವರನ್ನು ಪ್ರಯಾಗ್‌ರಾಜ್ ನಿವಾಸಿಗಳಾದ ಉಮರ್ ಅಹ್ಮದ್, ಮೊಹಮ್ಮದ್ ಜೈದ್ ಮತ್ತು ಅಸ್ಲಂ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 