ನವದೆಹಲಿ 09: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕಿ ಆತಿಶಿ, ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಲ್ಕಾಜಿ ಸ್ಥಾನದಲ್ಲಿ ಗೆಲುವು ಸಾಧಿಸಿರುವ ಅತಿಶಿ ಅವರು, ರಾಜ್ ನಿವಾಸದಲ್ಲಿ ಸಕ್ಸೇನಾ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ 48 ಕ್ಷೇತ್ರಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಬಿಜೆಪಿ 26 ವರ್ಷಗಳ ನಂತರ ಅಧಿಕಾರದ ಚುಕ್ಕಾಣಿ ಹಿಡಿದಿದೆ. .
ಫೆಬ್ರುವರಿ 5 ರಂದು ನಡೆದ ಚುನಾವಣೆಯಲ್ಲಿ ಎಎಪಿ 22 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಶೂನ್ಯಕ್ಕೆ ತೃಪ್ತಿಪಟ್ಟುಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯ ನಂತರ ದೆಹಲಿಯ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭವು ಫೆಬ್ರವರಿ 13 ರ ನಂತರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.