ಮಂಗಳೂರು, ಫೆ 6 , ರಾಜಕೀಯ ವೈಷಮ್ಯದ ಪ್ರಕರಣವೊಂದರಲ್ಲಿ, 28 ವರ್ಷದ ಬಿಜೆಪಿ ಕಾರ್ಯಕರ್ತನ ಮೇಲೆ ಮುಂಚೂರಿನಲ್ಲಿ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.ಗಾಯಗೊಂಡ ಬಿಜೆಪಿ ಕಾರ್ಯಕರ್ತನನ್ನು ಯಶೋಧರ್ ಎಂದು ಗುರುತಿಸಲಾಗಿದ್ದು, ಇಲ್ಲಿನ ಪದ್ಮಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ದಿವಾಕರ್, ದಿನೇಶ್ ಶೆಟ್ಟಿ, ಅಶ್ವಿತ್ ಕುಲಾಲ್ ಮತ್ತು ಯಶೋಧರ ಅಗರಮೇಲು ಎಂಬ ನಾಲ್ಕು ಜನರು ಯಶೋಧರ್ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಗ್ಯಾಂಗ್ ಕೆಲವು ಸಮಯದಿಂದ ಯಶೋಧರ್ ಅವರ ಚಲನವಲನಗಳ ಮೇಲೆ ನಿಗಾ ಇಟ್ಟಿತ್ತು ಎನ್ನಲಾಗಿದೆ. ಸೂರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.