ಪಾಕ್ ಷೇರು ಮಾರುಕಟ್ಟೆ ಮೇಲೆ ದಾಳಿ: ನಾಲ್ವರು ಉಗ್ರರ ಹತ್ಯೆ
ಇಸ್ಲಾಮಾಬಾದ್, ಜೂನ್ 29: ಪಾಕಿಸ್ತಾನ್ ಷೇರು ಮಾರುಕಟ್ಟೆಗೆ ಸೋಮವಾರ ಬೆಳಗ್ಗೆ ಗ್ರೆನೇಡ್ ಎಸೆದ ದಾಳಿಯಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದು ಇತರೆ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಕರಾಚಿಯಲ್ಲಿರುವ ಬಿಗಿ ಭದ್ರತೆ ಪ್ರದೇಶದಲ್ಲಿದ್ದ ಸ್ಟಾಕ್ ಎಕ್ಸ್ ಚೇಂಜ್ ಕಟ್ಟಡದೊಳಕ್ಕೆ ಗ್ರೆನೇಡ್ ಎಸೆದು ಉಗ್ರರು, ನಂತರ ಏಕಾಏಕಿ ಗುಂಡಿನ ದಾಳಿ ನಡೆಸಿದರು ಘಟನೆಯಲ್ಲಿ ಕರ್ತವ್ಯದಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಸಹ ಸಾವನ್ನಪ್ಪಿದ್ದು ಇತರೆ ಹಲವರು ಗಾಯಗೊಂಡಿದ್ದಾರೆಎಂದು ವರದಿಯಾಗಿದೆ.ವರದಿಯ ಪ್ರಕಾರ, ನಾಲ್ವರು ಉಗ್ರರು ದಾಳಿ ನಡೆಸಿದ್ದು, ನಂತರ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆಗೈದಿರುವುದಾಗಿ ತಿಳಿಸಿದೆ. ಸದ್ಯ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ಹೇಳಿದೆ.ಉಗ್ರರು ಪೊಲೀಸ್ ಸಮವಸ್ತ್ರದಲ್ಲಿ ಆಗಮಿಸಿ ದಾಳಿ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ಮಾಧ್ಯಮಗಳ ವರದಿ ಪ್ರಕಾರ, ಪಾಕ್ ಸ್ಟಾಕ್ ಎಕ್ಸ್ ಚೇಂಜ್ ಮೇಲಿನ ದಾಳಿಯ ಹೊಣೆಯನ್ನು ಬಲೂಚ್ ಲಿಬರೇಷನ್ ಆರ್ಮಿ ಹೊತ್ತುಕೊಂಡಿರುವುದಾಗಿ ಹೇಳಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 