ವಕೀಲರ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ
ಹೂವಿನ ಹಡಗಲಿ 21: ಭಾರತೀಯ ವಕೀಲ ಪರಿಷತ್ತಿನಸದಸ್ಯರಾಗಿರುವ ವಕೀಲ ವೈ.ಆರ್.ಸದಾಶಿವರೆಡ್ಡಿ ಮೇಲಿನ ಮಾರಣಾಂತಿಕ ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಇಲ್ಲಿನ ತಾಲ್ಲೂಕು ವಕೀಲರ ಸಂಘ ದಿಂದ ಒತ್ತಾಯಿಸಿದ್ದಾರೆ.
ಈ ಬಗ್ಗೆ ತಹಶಿಲ್ದಾರರಿಗೆ ಮನವಿ ಸಲ್ಲಿಸಿ ಕೂಡಲೇ ವೈ.ಆರ್.ಸದಾಶಿವರೆಡ್ಡಿ ಅವರ ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈಗಾಗಲೇ ವಕೀಲರ ರಕ್ಷಣೆಗಾಗಿ ಕಾಯ್ದೆ ಜಾರಿಯಾಗಿದ್ದರೂ, ದುಷ್ಕರ್ಮಿಗಳು ಯಾವುದೇ ಕಾನೂನಿನ ಭಯ ಇಲ್ಲದೇ ಕೃತ್ಯ ಎಸಗಿದ್ದಾರೆ. ಹೀಗಾಗಿ ಪೊಲೀಸರು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ವಕೀಲರ ಸಮುದಾಯದಲ್ಲಿ ಆತಂಕ ಸೃಷ್ಟಿಯಾಗಿದೆ. ಇಂತಹ ಘಟನೆ ಮರುಕಳಿಸದಂತೆ ಗೃಹ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ. ಇದೇ ವೇಳೆ ವಕೀಲರ ಸಂಘದ ಅದ್ಯಕ್ಷ ವಸಂತ ಕುಮಾರ, ಉಪಾಧ್ಯಕ್ಷ ಜ್ಯೋತಿ ಮಲ್ಲಣ್ಣ, ಕಾರ್ಯದರ್ಶಿ ಡಿ.ಸಿದ್ದನಗೌಡ, ಖಜಾಂಚಿ ಎಂ, ಪಿ ಎಂ, ಪ್ರಸನ್ನ ಕುಮಾರ ಇದ್ದರು.