ವೇಶಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ 6 ಮಹಿಳೆಯರ ರಕ್ಷಣೆ : ಓರ್ವ ವಶಕ್ಕೆ

Attack on prostitution spa center Rescue of 6 women : For one year

ಬೆಳಗಾವಿ : ವೇಶಾವಾಟಿ ನಡೆಸುತ್ತಿದ್ದ ಸ್ಪಾ ಮತ್ತು ಬ್ಯೂಟಿ ಪಾರ್ಲರ ಸೆಂಟರ್ ಒಂದರ ಮೇಲೆ ದಾಳಿ ಮಾಡಿರುವ ಬೆಳಗಾವಿಯ ಸಿಇಎನ್  ಪೊಲೀಸರು 6 ಮಹಿಳೆಯರನ್ನು ರಕ್ಷಣೆ ಮಾಡುವ ಮೂಲಕ ಮಾಲಿಕಳನ್ನು ವಶಕ್ಕೆ ಪಡೆದಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ. 

    ಬೆಳಗಾವಿಯ ಅನಗೂಳದ ಮುಖ್ಯ ರಸ್ತೆಯಲ್ಲಿ ಇರುವ ಅಂಜಲಿ ಸ್ಪಾ ಮತ್ತು ಬ್ಯೂಟಿ ಪಾರ್ಲ ರ್ ಮೇಲೆ ಈ ದಾಳಿಯನ್ನು ನಡೆಸಲಾಗಿದೆ. ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸ್ ಆಯುಕ್ತ ಹಾಗೂ ಉಪ ಆಯುಕ್ತರ ಮಾರ್ಗದರ್ಶನದಂತೆ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯ ಪಿಐ ಬಿ.ಆರ್. ಗಡ್ಡೇಕರ್ ಅವರ ನೇತ್ರತ್ವದಲ್ಲಿ ಈ ದಾಳಿ ನಡೆದಿದೆ. 

    ಈ ದಾಳಿ ವೇಳೆ ವೇಶಾವಾಟಿಕೆಯಲ್ಲಿ ತೊಡಗಿದ್ದ 6 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಅಲ್ಲದೆ ಈ ವೇಶಾವಾಟಿಕೆ ಚಟುವಟಿಕೆಯಲ್ಲಿ ಜಿಲ್ಲೆಯ ಸಂಕೇಶ್ವರ ಪಟ್ಟಣದ ಹಾಗೂ ಕಾಕತಿಯ ಮಹಿಳೆ ಸೇರಿ  ಅನಗೂಳದ ನಾಲ್ವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. 

  ಅಲ್ಲದೆ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮಾಲಿಕಿಯಾದ ಅಂಜಲಿ ಅವಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ದಾಳಿ ವೇಳೆ ಸಾವಿರಾರು ನಗದು ಹಣ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಸಿಇಎನ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.