ಹಾವೇರಿ ನಗರದ ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ
Attack on shops selling tobacco products in Haveri city
ಹಾವೇರಿ ನಗರದ ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ
ಹಾವೇರಿ 10: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಮುಕ್ತ ಯುವ ಅಭಿಯಾನದ ಅಂಗವಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಮಂಗಳವಾರ ಹಾವೇರಿ ನಗರದ ವಿವಿಧ ಧೂಮಪಾನ ಅಡ್ಡಾಗಳು ಹಾಗೂ ಪಾನ್‌ಶಾಪ್‌ಗಳ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಿದೆ.
ಪರವಾನಿಗೆ ಪಡೆಯದೇ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಹಾಗೂ ಕಾಯ್ದೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ, ತಂಬಾಕು ನಿಯಂತ್ರಣ ಕಾಯ್ದೆ-2003ರ ಕಲಂ-4ರ ಅಡಿಯಲ್ಲಿ 21 ಪ್ರಕರಣಗಳಿಂದ ರೂ.1,940/-ದಂಡ ವಸೂಲಿ ಮಾಡಲಾಗಿದೆ. ಪರೋಕ್ಷವಾಗಿ ತಂಬಾಕು ಜಾಹೀರಾತು ಮಾಡುವ ಆರು ಫಲಕಗಳನ್ನು ತೆರವುಗೊಳಿಸಲಾಗಿದೆ.
ಈ ತನಿಖಾ ದಾಳಿ ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಡಾ.ಸಂತೋಷ ದಡ್ಡಿ, ಸಮಾಜ ಕಾರ್ಯಕರ್ತ ದಾದಾಪೀರ ಹುಲಿಕಟ್ಟಿ, ಹಿರಿಯ ಆರೋಗ್ಯ ನೀರೀಕ್ಷಕ ಅಮೃತಗೌಡ ಪಾಟೀಲ, ನಗರಸಭೆ ಆರೋಗ್ಯ ನೀರೀಕ್ಷಕಿ ಶ್ರೀಮತಿ ಪರಿಮಳ ಕರಮಡಿ, ಮಹೇಶ ಕುಮ್ಮೂರ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 