ತಂಬಾಕು ಪದಾರ್ಥಗಳ ಮಾರಾಟ ಅಂಗಡಿಗಳ ಮೇಲೆ ದಾಳಿ: ಪ್ರಕರಣ ದಾಖಲು

ಕೊಪ್ಪಳ 15: ಜಿಲ್ಲೆಯ ಕುಷ್ಟಗಿ ಪಟ್ಟಣದ ತಂಬಾಕು ಪದಾರ್ಥಗಳ ಮಾರಾಟ ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ತಪಾಸಣಾ ತಂಡವು ಅಕ್ಟೋಬರ್ 14ರಂದು ದಾಳಿ ಮಾಡಿ ಪ್ರಕರಣಗಳನ್ನು ದಾಖಲಿಸಿದೆ.  

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ "ತಂಬಾಕು ಮುಕ್ತ ಯುವ ಅಭಿಯಾನ 2.0" ಅಂಗವಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪೋಲಿಸ್ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲದ ಅಧಿಕಾರಿಗಳು ಹಾಗೂ ನಗರ ಸಭೆ ಸಿಬ್ಬಂದಿಗಳ ಸಹಯೋಗದಲ್ಲಿ ಕುಷ್ಟಗಿ ತಾಲೂಕಿನಲ್ಲಿ ಕೊಟ್ಟಾ-2003 ಕಾಯ್ದೆಯಡಿಯಲ್ಲಿ ತಂಬಾಕು ಹಾಗೂ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ, ಸೆಕ್ಷನ್4ರಡಿಯಲ್ಲಿ 18 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣ ಘಟಕದ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿಗಳು ತಿಳಿಸಿದ್ದಾರೆ.