ವಿವಿಧ ತಂಬಾಕು ಮಾರಾಟ ಅಂಗಡಿ ಮೇಲೆ ದಾಳಿ
ಬಾಗಲಕೋಟೆ: ಜಿಲ್ಲೆಯ ತಂಬಾಕಿ ನಿಯಂತ್ರಣ ತಂಡ ಬೀಳಗಿ ನಗರದ ವಿವಿಧ ತಂಬಾಕು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯಿದೆ ನಿಯಮಗಳ ಉಲ್ಲಂಘಣೆ ಆರೋಪದಡಿ 22 ಪ್ರಕರಣ ದಾಖಲಿಸುವದರ ಜೊತೆಗೆ 3100 ರೂ.ಗಳ ದಂಡವಿದಿಸಿದೆ.
ಬೀಳಗಿ ನಗರದಲ್ಲಿ ಇತ್ತೀಚೆಗೆ ತಂಬಾಕು ಉತ್ಪನ್ನಗಳ ಸಗಟು ಹಾಗೂ ಚಿಲ್ಲರೆ ಮಾರಾಟಗಾರರ ಅಂಗಡಿಗಳಿಗೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ 2003ರ 4 ಮತ್ತು 6ಸೆಕ್ಷನ್ಗಳ ಉಲ್ಲಂಘಿಸಿದವರ ವಿರುದ್ದ ಒಟ್ಟು 22 ಪ್ರಕರಣಗಳನ್ನು ದಾಖಲಿಸಲಾಗಿದೆ. ಅಲ್ಲದೇ ತಂಬಾಕು ಉತ್ಪನ್ನ ಮಾರಾಟಗಾರರಿಗೆ ತಮ್ಮ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಫಲಕ ಹಾಕುವುದು ಹಾಗೂ ಸಿಗರೇಟ್, ಬೀಡಿಗಳನ್ನು ಬಿಡಿ ಬಿಡಿಯಾಗಿ ಮಾರಟ ಮಾಡಬಾರದು, ತಂಬಾಕು ಉತ್ಪನ್ನಗಳ ಬಗ್ಗೆ ಗೋಡೆ ಬರಹ, ಹೋಡರ್ಿಂಗ್ಸ್ ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಮೂಲಕ ತಂಬಾಕು ಉತ್ಪನ್ನಗಳ ಜಾಹೀರಾತು ಮಾಡಬಾರದೆಂದು ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಲಾಯಿತು.
ಸೆಕ್ಷನ್ 6 (ಬಿ) ಕಾಯ್ದೆ ಅನುಸಾರ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ ಉಲ್ಲಂಘಣೆಯಾದರೆ ದಂಡ ಹಾಗೂ ಸೆರೆವಾಸ ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದರು.
ದಾಳಿಯಲ್ಲಿ ಬೀಳಗಿ ತಾಲೂಕಿನ ತಹಸಿಲ್ದಾರಾದ ಬಿ.ಪಿ.ಅಜೂರ, ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ.ಡಿ.ಎಸ್.ಕರೆಣ್ಣವರ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂಅದ ಜಿಲ್ಲಾ ತಂಬಾಕು ಸಲಹೆಗಾರರಾದ ಶಶಿಕಾಂತ ಕುಮಠಳ್ಳಿ, ಶಿವಲಿಂಗ ಕರಗಣ್ಣಿ, ಬೀಳಗಿ ಪಟ್ಟಣ ಪಂಚಾಯತ ಸಿಬ್ಬಂದಿಯಾದ ಇಸ್ಮಾಯಿಲ್ ಹಾಗೂ ನಗರ ಪೋಲಿಸ್ ಠಾಣೆಯ ಎ.ಎಸ್.ಐ ಕೂಡಲಗಿ ರವರು ಭಾಗವಹಿಸಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 