ವಿವಿಧೆಡೆ ದಾಳಿ: ಓರ್ವ ಬಾಲಕಾರ್ಮಿಕನ ರಕ್ಷಣೆ
Attacked in various places: Rescue of a child laborer
ಬಳ್ಳಾರಿ 13: ಸಂಡೂರು ತಾಲ್ಲೂಕಿನ ಕುಡತಿನಿ, ತೋರಣಗಲ್ಲು ಮತ್ತು ವಡ್ಡು ಗ್ರಾಮಗಳ ಮುಖ್ಯ ರಸ್ತೆಗಳಲ್ಲಿನ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಕಟ್ಟಡ ನಿರ್ಮಾಣ ಕೆಲಸ, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿಯು ದಾಳಿ ನಡೆಸಿ ಓರ್ವ ಬಾಲಕಾರ್ಮಿಕನನ್ನು ರಕ್ಷಿಸಲಾಗಿದೆ. ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರಾದ ತಹಶೀಲ್ದಾರರ ನೇತೃತ್ವದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್‌ಫೋರ್ಸ್ ಸಮಿತಿ ಸಭೆ ನಡೆಸಿ ಈ ದಾಳಿ ಕೈಗೊಳ್ಳಲಾಗಿದೆ. ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಉಪತಹಶೀಲ್ದಾರ ದೇಸಾಯಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಮಕ್ಕಳ ಸಹಾಯವಾಣಿ ಸಿಬ್ಬಂದಿಯಾದ ಕಾರ್ತಿಕ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 