ನಗರದ ವಿವಿಧ ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ
Attacks on various shops selling tobacco products in the city
ನಗರದ ವಿವಿಧ ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ
ಹಾವೇರಿ 06 : ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣ ಹಾಗೂ ಹಾವೇರಿ ನಗರದ ವಿವಿಧ ಧೂಮಪಾನ ಅಡ್ಡಾಗಳು ಹಾಗೂ ಪಾನ್‌ಶಾಪ್‌ಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಿದೆ.
ಪರವಾನಿಗೆ ಪಡೆಯದೇ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಹಾಗೂ ಕಾಯ್ದೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ, ತಂಬಾಕು ನಿಯಂತ್ರಣ ಕಾಯ್ದೆ-2003ರ ಕಲಂ-6ಬಿ ಅಡಿಯಲ್ಲಿ 18 ಪ್ರಕರಣಗಳಿಂದ ರೂ.1,800 ಹಾಗೂ ಕಲಂ-4ರಡಿಯಲ್ಲಿ ಎರಡು ಪ್ರಕರಣಗಳಿಂದ ರೂ.200 ಸೇರಿ ಒಟು ರೂ.2,000/-ದಂಡ ವಸೂಲಿ ಮಾಡಲಾಗಿದೆ. ಪರೋಕ್ಷವಾಗಿ ತಂಬಾಕು ಜಾಹೀರಾತು ಮಾಡುವ ಐದು ಫಲಕಗಳನ್ನು ತೆರವುಗೊಳಿಸಲಾಗಿದೆ.
ಈ ತನಿಖಾ ದಾಳಿ ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಡಾ.ಸಂತೋಷ ದಡ್ಡಿ, ಸಮಾಜ ಕಾರ್ಯಕರ್ತ ದಾದಾಪೀರ ಹುಲಿಕಟ್ಟಿ, ಆರೋಗ್ಯ ನೀರೀಕ್ಷಣಾಧಿಕಾರಿ ಕೃಷ್ಣಪ್ಪ ಕನ್ನಮ್ಮನವರ, ಆರೋಗ್ಯ ನೀರಕ್ಷಕರಾದ ಶ್ರೀಮತಿ ಪರಿಮಳ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಶಿವಪ್ಪ ಲಮಾಣಿ, ಮಹೇಶ ಕುಮ್ಮೂರ ಇತರರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 