ಸಂತೆಯಲ್ಲಿ ವೃದ್ಧೆಯ ರೂ50 ಸಾವಿರ ಕಳವಿಗೆ ಯತ್ನ: ಮಹಿಳೆ ಸೆರೆ
Attempt to steal Rs 50,000 from elderly woman at market: Woman nabbed
ಲೋಕದರ್ಶನ ವರದಿ
ಜಮಖಂಡಿ 28: ನಗರದ ಜೋಳದ ಬಜಾರ್‌ನ ಲಕ್ಷ್ಮೀ ದೇವಸ್ಥಾನ ಸಮೀಪ ಗುರುವಾರ ನಡೆದ ಸಂತೆಯಲ್ಲಿ ವೃದ್ಧೆಯೊಬ್ಬರ ಬ್ಯಾಗ್‌ನಲ್ಲಿದ್ದ ?50 ಸಾವಿರ ಹಣವನ್ನು ಕಳವು ಮಾಡಿ ಪರಾರಿಯಾಗಲು ಯತ್ನಿಸಿದ ಮಹಿಳೆಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ನಗರದ ಗಂಗವ್ವ ನಾಡಗೌಡ ಎಂಬ ವೃದ್ಧೆ ಕಳೆದ ಆರು ತಿಂಗಳ ವೃದ್ಧಾಪ್ಯ ವೇತನದ ಹಣವನ್ನು ಬ್ಯಾಂಕ್‌ನಿಂದ ಪಡೆದುಕೊಂಡು ಮೊಮ್ಮಕ್ಕಳೊಂದಿಗೆ ಗುರುವಾರ ಸಂತೆಗೆ ಬಂದಿದ್ದರು. ಈ ವೇಳೆ ಅವರ ಬ್ಯಾಗ್‌ನಲ್ಲಿ ಹಣ ಇರುವುದನ್ನು ಗಮನಿಸಿದ ಮಹಿಳೆಯೊಬ್ಬಳು ಹಣ ಕಳವು ಮಾಡಿ ಪರಾರಿಯಾಗಲು ಯತ್ನಿಸಿದ್ದಾಳೆ ಎನ್ನಲಾಗಿದೆ.
ಬಾಳೆಹಣ್ಣಿನ ವ್ಯಾಪಾರ ಮಾಡುತ್ತಿದ್ದ ಮಹಿಳೆಯೊಬ್ಬರು ಕಳವು ನಡೆಯುತ್ತಿರುವುದನ್ನು ಗಮನಿಸಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪತ್ರಕರ್ತ ಶಶಿಕಾಂತ ತೇರದಾಳ ಅವರು ಆರೋಪಿತ ಮಹಿಳೆಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಅನಿಲ್ ಕುಂಬಾರ ಅವರ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿತ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸಂತೆ ಹಾಗೂ ಜನಸಂದಣಿ ಇರುವ ಪ್ರದೇಶಗಳಿಗೆ ಬರುವ ಸಾರ್ವಜನಿಕರು ತಮ್ಮ ಹಣ, ಮೊಬೈಲ್ ಹಾಗೂ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಕಳ್ಳತನದ ಘಟನೆಗಳು ನಡೆಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತಮ್ಮ ವಸ್ತುಗಳ ಮೇಲೆ ನಿಗಾ ಇರಿಸಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 