ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
Attempt to weaken the Right to Information Act: Gada warns of legal battle if no action is taken aga
ಬೆಳಗಾವಿ : ಭ್ರಷ್ಟರಿಗೆ ಸಿಂಹಸ್ವಪ್ನವಾಗಿರುವ ಮಾಹಿತಿ ಹಕ್ಕು ಕಾಯಯ್ದೆಯನ್ನು ದುರ್ಬಲ ಮಾಡುತ್ತಿರುವ ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರು ಹಾಗೂ ಆಯುಕ್ತರು ವಿರುದ್ಧ ಸಲ್ಲಿಸಲಾದ ಗಂಭೀರ ಆರೋಪಗಳ ಬಗ್ಗೆ ರಾಜ್ಯಪಾಲರು ತ್ವರಿತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಕಾನೂನು ಹೋರಾಟ ನಡೆಸಲಾಗುವದು ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಹಾಗೂ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ತಿಳಿಸಿದ್ದಾರೆ.
ಸೋಮವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಸಂಬಂಧ ರಾಜ್ಯಪಾಲರಿಗೆ ಪತ್ರ ಬರೆದಿರುವ ಸಾಮಾಜಿಕ ಹೋರಾಟಗಾರರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತರು ಮುಖ್ಯ ಕಾರ್ಯದರ್ಶಿ ಮತ್ತು ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಿಗೆ ದಾಖಲೆ ಸಮೇತ ದೂರು ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ. ಸರ್ಕಾರವು ಈ ದೂರುಗಳನ್ನು ರಾಜ್ಯಪಾಲರಿಗೆ ಕಳುಹಿಸಿ ಸುಮಾರು ಐದು ತಿಂಗಳು ಕಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಆತಂಕಕಾರಿ ಎಂದು ಆರೋಪಿಸಿದ್ದಾರೆ.
ದೂರುಗಳ ಕುರಿತು ಸಮರ್ಪಕ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳದಿದ್ದರೆ ರಾಜ್ಯಭವನದ ಸಂಬಂಧಿತ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಆರಂಭಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಸಂವಿಧಾನದ ಮುಖ್ಯಸ್ಥರಾಗಿರುವ ರಾಜ್ಯಪಾಲರು, ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗದ ಗಂಭೀರ ವಿಷಯಗಳಲ್ಲಿ ಮಧ್ಯಪ್ರವೇಶಿಸಿ ಸೂಕ್ತ ನಿರ್ದೇಶನ ನೀಡುವುದು ಜವಾಬ್ದಾರಿಯಾಗಿದೆ. ಆದರೆ ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸುತ್ತಿರುವ ಆರೋಪಗಳ ಕುರಿತು ಸಲ್ಲಿಸಲಾದ ದೂರುಗಳ ಮೇಲೂ ಕ್ರಮ ಕೈಗೊಳ್ಳದಿರುವುದು ಪ್ರಶ್ನಾರ್ಹ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಪ್ರಮುಖ ಅಂಶಗಳು:
ಮಾಹಿತಿ ಆಯುಕ್ತರ ನೇಮಕಾತಿಗೂ ಮುನ್ನ ಶೋಧನಾ ಸಮಿತಿ ರಚಿಸಬೇಕೆಂಬ ಸುಪ್ರೀಂ ಕೋರ್ಟ್ ನಿರ್ದೇಶನ ಉಲ್ಲಂಘಿಸಿ ನೇಮಕಾತಿ ಮಾಡಲಾಗಿದೆ ಎಂಬ ಆರೋಪ ಇದೆ. ಈ ಕುರಿತು ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿರುವುದಾಗಿ ಎಂದು ತಿಳಿಸಲಾಗಿದೆ.
ಒಬ್ಬ ವ್ಯಕ್ತಿ 25 ಅಥವಾ ಅದಕ್ಕಿಂತ ಹೆಚ್ಚು ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದರೆ ಅದು ಕಾಯ್ದೆಯ ದುರ್ಬಳಕೆ ಎಂಬ ಆಯೋಗದ ತೀರ್ಪು ಕಾನೂನುಬಾಹಿರವಾಗಿದೆ ಎಂದು ಆಕ್ಷೇಪಿಸಲಾಗಿದೆ. ಆರ್‌ಟಿಐ ಕಾರ್ಯಕರ್ತರನ್ನು ಕಪ್ಪುಪಟ್ಟಿಗೆ ಸೇರಿಸಲು ಯಾವುದೇ ಕಾನೂನು ಅವಕಾಶವಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ ಸ್ಪಷ್ಟಪಡಿಸಿದ್ದರೂ, 22 ಕಾರ್ಯಕರ್ತರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಆಯುಕ್ತರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವುದನ್ನು ಪ್ರಶ್ನಿಸಲಾಗಿದೆ.
ಸರ್ಕಾರಿ ನೌಕರರ ವೈಯಕ್ತಿಕ ಮಾಹಿತಿಯನ್ನು ಮಾಹಿತಿ ಹಕ್ಕು ಕಾಯ್ದೆಯಡಿ ನೀಡಲು ಅವಕಾಶವಿಲ್ಲ ಎಂದು ಅರ್ಜಿಗಳನ್ನು ತಿರಸ್ಕರಿಸುವ ಕ್ರಮದ ವಿರುದ್ಧವೂ ದೂರು ಸಲ್ಲಿಸಲಾಗಿದೆ.
ಕೇಂದ್ರ ಹಾಗೂ ರಾಜ್ಯ ಮಾಹಿತಿ ಆಯೋಗದ ನಿಯಮಾವಳಿಗಳಿಗೆ ವಿರುದ್ಧವಾಗಿ ಹೇಳಿಕೆಗಳನ್ನು ನೀಡುವ ಮೂಲಕ ಮಾಹಿತಿ ಹಕ್ಕು ಕಾರ್ಯಕರ್ತರನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಮುಖ್ಯ ಮಾಹಿತಿ ಆಯುಕ್ತರು ಹಾಗೂ ಮಾಹಿತಿ ಆಯುಕ್ತರ ಕಾರ್ಯವೈಖರಿಗೆ ಸಂಬಂಧಿಸಿದಂತೆ ಒಟ್ಟು ಹತ್ತು ಗಂಭೀರ ಪ್ರಕರಣಗಳು ದಾಖಲಾಗಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯಭವನಕ್ಕೆ ಸಲ್ಲಿಕೆಯಾಗಿರುವ ಎಲ್ಲಾ ದೂರುಗಳ ಕುರಿತು ಸಮಗ್ರ ವಿಚಾರಣೆ ನಡೆಸಿ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಮಾಹಿತಿ ಆಯುಕ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಾನೂನು ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಭೀಮಪ್ಪ ಗಡಾದ ಅವರು ಮನವಿ ಪತ್ರದಲ್ಲಿ ತಿಳಿಸಿರುವದಾಗಿ ಹೇಳಿದರು.
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು 