ಕೊಲ್ಹಾರದಲ್ಲಿ ಅಂಗಡಿಗಳ ಶಟರ್ ಮುರಿದು ಕಳ್ಳತನ ಯತ್ನ; ವ್ಯಾಪಾರಿಗಳಲ್ಲಿ ಆತಂಕ
Attempted theft by breaking shop shutters in Kolhara; traders worried
ಕೊಲ್ಹಾರ 20 : ಪಟ್ಟಣದಲ್ಲಿ ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಹಲವು ಅಂಗಡಿಗಳ ಶಟರ್ಗಳನ್ನು ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಕೆಲ ಅಂಗಡಿಗಳಲ್ಲಿ ನಗದು ಹಣ ಕಳುವಾಗಿದ್ದು, ಇನ್ನು ಕೆಲವು ಅಂಗಡಿಗಳಲ್ಲಿ ಶಟರ್ಗಳನ್ನು ಮುರಿದು ಒಳ ಪ್ರವೇಶಿಸಲು ಪ್ರಯತ್ನಿಸಿದರೂ ಯಾವುದೇ ಮೌಲ್ಯಯುತ ವಸ್ತುಗಳು ಕಳುವಾಗಿಲ್ಲ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಗಣಾಚಾರಿ, ಸುನೀಲ ಮಡ್ಡೆನವರ, ರಾಜು ರೇಷ್ಮಿ ಹಾಗೂ ಸಚಿನ್ ಕಣಬೂರ ಅವರ ಅಂಗಡಿಗಳ ಶಟರ್ಗಳನ್ನು ಮುರಿದು ಕಳ್ಳತನಕ್ಕೆ ಯತ್ನಿಸಲಾಗಿದೆ. ಘಟನೆಯಿಂದ ವ್ಯಾಪಾರಿಗಳಲ್ಲಿ ಆತಂಕ ಉಂಟಾಗಿದ್ದು, ಪಟ್ಟಣದಲ್ಲಿ ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರೀಶೀಲಿಸಿ ಕಳ್ಳರ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ. ಕಳ್ಳತನದ ಯತ್ನ ನಡೆಸಿದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ವ್ಯಾಪಾರಿಗಳು ಆಗ್ರಹಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 