ವಿವಿಧ ಗ್ರಾಮಗಳ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುಧಾನ : ಶಾಸಕ ಪಠಾಣ
Attention to the renovation of temples in various villages: MLA Pathana
ಶಿಗ್ಗಾವಿ 03 : 2 ತಾಲೂಕಿನ ವಿವಿಧ ಗ್ರಾಮಗಳ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ಕೊಟ್ಟಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅಸೂಯೆ, ಹೊಟ್ಟೆ ಕಿಚ್ಚು ವ್ಯಕ್ತಪಡಿಸುತ್ತಿದ್ದಾರೆ ಎಂದು ಶಾಸಕ ಯಾಸೀರಖಾನ್ ಪಠಾಣ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕಿನ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಅನುದಾನದ ಚೆಕ್ ವಿತರಿಸಿ ಮಾತನಾಡಿದ ಅವರು ಹೊಸದಾಗಿ 70 ದೇವಸ್ಥಾನಗಳಿಗೆ 3.5 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಪಂಚಾಯತ್ ರಾಜ್, ಆರಾಧನಾ, ಮುಜರಾಯಿ, ಮುಖ್ಯಮಂತ್ರಿಗಳ ವಿಶೇಷ ಅನುದಾನ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಕ್ಷೇತ್ರದಲ್ಲಿ ದೇವಸ್ಥಾನಗಳ ನಿರ್ಮಾಣ, ಜೀರ್ಣೋದ್ಧಾರಕ್ಕಾಗಿ ಅನುದಾನ ತಂದಿದ್ದೇನೆ. ಇದಕ್ಕೆ ಹೊಟ್ಟೆ ಕಿಚ್ಚು, ಅಸೂಯೆ ವ್ಯಕ್ತಪಡಿಸುವ ವಿರೋಧಿಗಳಿಗೆ ಚೆಕ್ ಪಡೆದುಕೊಂಡವರು ಉತ್ತರ ನೀಡಬೇಕಿದೆ ಎಂದರು.
ಹಿಂದಿನ ಸರ್ಕಾರದಲ್ಲಿ ಭೂಮಿಪೂಜೆ ಮಾಡಿ ಹೋಗಿದ್ದರು. ನಮ್ಮ ಸರ್ಕಾರ ಅದಕ್ಕೆ ಅನುದಾನ ಕೊಟ್ಟು ಪೂರ್ಣಗೊಳಿಸುವ ಕೆಲಸ ಮಾಡುತ್ತಿದೆ. ವಿಶೇಷವಾಗಿ ಈ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ, ಸಚಿವರು ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. ಶಿಗ್ಗಾವಿ, ಬಂಕಾಪುರ, ಸವಣೂರ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸುವ ಯೋಜನೆ, ಆಸ್ಪತ್ರೆಗಳ ಕಟ್ಟಡಗಳ ನಿರ್ಮಾಣ ಸೇರಿದಂತೆ ಎಲ್ಲ ವಲಯಗಳ ಅಭಿವೃದ್ಧಿಗೆ 1400 ಕೋಟಿ ರೂ. ಅನುದಾನ ತಂದಿದ್ದೇನೆ. 13 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿಸಿದ್ದೇನೆ. ವಿಶೇಷವಾಗಿ ಕೋಟ್ಯಂತರ ರೂಪಾಯಿ ಅನುದಾನದಲ್ಲಿ ದೇವಸ್ಥಾನಗಳ ಅಭಿವೃದ್ಧಿ, ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದರು. ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ, ವಿವಿಧ ಇಲಾಖೆಗಳ ಅಧಿಕಾರಿಗಳು, ಆರಾಧನಾ ಸಮಿತಿ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 