ಬೆಂಗಳೂರು, ಆ.18- ವಿಜಯನಗರ ಪೊಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡಿರುವ 42 ವಾಹನಗಳನ್ನು ನಾಳೆ (ಆ.19) ಬಹಿರಂಗ ಹರಾಜು ಮಾಡಲಾಗುತ್ತಿದೆ.
ಈ ವಾಹನಗಳ ವಾರಸುದಾರರು ಪತ್ತೆಯಾಗದ ಕಾರಣ ನ್ಯಾಯಾಲಯದ ಆದೇಶದಂತೆ ಅಂದು ವಿಜಯನಗರ ಪೊಲೀಸ್ ಠಾಣೆ ಆವರಣದಲ್ಲಿ ವಾಹನಗಳನ್ನು ಹರಾಜು ಮಾಡಲಾಗುತ್ತದೆ.
ಆಸಕ್ತ ಸಾರ್ವಜನಿಕರು ಬಹಿರಂಗ ಹರಾಜಿನಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪೀಣ್ಯ ಸಂಚಾರ ಠಾಣೆ: ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಅಮಾನತ್ತುಪಡಿಸಿಕೊಂಡಿರುವ ದ್ವಿಚಕ್ರ, ತ್ರಿಚಕ್ರ ವಾಹನಗಳ ವಾರಸುದಾರರು ಪತ್ತೆಯಾಗದ ಕಾರಣ 3ನೇ ಸಂಚಾರ ನ್ಯಾಯಾಲಯದ ಆದೇಶದಂತೆ ಹಾಗೂ ಉಪ ಪೊಲೀಸ್ ಆಯುಕ್ತರ ಅನುಮತಿಯಂತೆ ವಿವಿಧ ಬಗೆಯ ವಾಹನಗಳನ್ನು ಆ.20ರಂದು ಬೆಳಗ್ಗೆ 11.30 ಗಂಟೆಗೆ ಪೀಣ್ಯ ಸಂಚಾರಿ ಪೊಲೀಸ್ ಠಾಣೆ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುತ್ತಿದೆ.
ಆಸಕ್ತಿ ಉಳ್ಳವರು ಹರಾಜಿನಲ್ಲಿ ಭಾಗವಹಿಸಿ ವಾಹನಗಳನ್ನು ಕೊಂಡುಕೊಳ್ಳಲು ಕೋರಲಾಗಿದೆ.