ಆಗಸ್ಟ್‌ 2ರ ಪರೀಕ್ಷೆ: ಒಂದೇ ಕೇಂದ್ರದಲ್ಲಿ ಆರ​‍್ಿಸಿ ಹಾಗೂ ಕಲ್ಯಾಣ ಕರ್ನಾಟಕ ಪರೀಕ್ಷೆ ನಡೆಸಲು ಅಭ್ಯರ್ಥಿಗಳ ಮನವಿ

ಆಗಸ್ಟ್‌ 2ರ ಪರೀಕ್ಷೆ: ಒಂದೇ ಕೇಂದ್ರದಲ್ಲಿ ಆರ​‍್ಿಸಿ ಹಾಗೂ ಕಲ್ಯಾಣ ಕರ್ನಾಟಕ ಪರೀಕ್ಷೆ ನಡೆಸಲು ಅಭ್ಯರ್ಥಿಗಳ ಮನವಿ  August 2 Exam: Candidates request holding both the RPC and Kalyana Karnataka exams at the same cente

ಲೋಕದರ್ಶನ ವರದಿ

ಧಾರವಾಡ 28 : ಆಗಸ್ಟ್‌ 2ರಂದು ನಡೆಯಲಿರುವ ಸಿವಿಲ್ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಆರ​‍್ಿಸಿ  ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಪರೀಕ್ಷೆಗಳಿಗೆ ಒಂದೇ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸುವಂತೆ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯು ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ.  

ಸಮಿತಿಯ ಪ್ರಕಾರ, ಸಾವಿರಾರು ಅಭ್ಯರ್ಥಿಗಳಿಗೆ ಬೆಳಗ್ಗೆ ಮತ್ತು ಮಧ್ಯಾಹ್ನ ನಡೆಯುವ ಪರೀಕ್ಷೆಗಳಿಗೆ ಬೇರೆ ಬೇರೆ ಸ್ಥಳಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಒಂದು ಕೇಂದ್ರದಿಂದ ಮತ್ತೊಂದು ಕೇಂದ್ರಕ್ಕೆ ತೆರಳಲು ಹಲವು ಕಡೆಗಳಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಬೇಕಾಗುತ್ತದೆ. ವಿಶೇಷವಾಗಿ ಬೆಂಗಳೂರಿನಂತಹ ಸಂಚಾರ ದಟ್ಟಣೆ ಇರುವ ನಗರಗಳಲ್ಲಿ ಈ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ.  

ಇದೇ ವೇಳೆ, ಪರೀಕ್ಷಾ ಸೂಚನೆಗಳ ಪ್ರಕಾರ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೂ ಎರಡು ಗಂಟೆಗಳ ಮುಂಚಿತವಾಗಿ ಕೇಂದ್ರದಲ್ಲಿ ಹಾಜರಿರಬೇಕು ಎಂದು ತಿಳಿಸಲಾಗಿದೆ. ಹೀಗಾಗಿ, ಒಂದು ಕೇಂದ್ರದಿಂದ ಮತ್ತೊಂದು ಕೇಂದ್ರಕ್ಕೆ ತೆರಳಿ ನಿಗದಿತ ಸಮಯಕ್ಕೆ ಹಾಜರಾಗುವುದು ಅಸಾಧ್ಯವಾಗಿದ್ದು, ಇದರಿಂದ ಅಭ್ಯರ್ಥಿಗಳಲ್ಲಿ ಆತಂಕ ಮತ್ತು ಒತ್ತಡ ಹೆಚ್ಚಾಗಿದೆ ಎಂದು ಸಮಿತಿ ತಿಳಿಸಿದೆ.  

ಆದ್ದರಿಂದ, ಈಗಾಗಲೇ ಬೆಳಗಿನ ಪರೀಕ್ಷೆಗೆ ನಿಗದಿಪಡಿಸಿರುವ ಅದೇ ಕೇಂದ್ರದಲ್ಲೇ ಮಧ್ಯಾಹ್ನದ ಪರೀಕ್ಷೆಯನ್ನೂ ನಡೆಸುವಂತೆ ಕೆಇಎಗೆ ಮನವಿ ಮಾಡಲಾಗಿದೆ. ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಸಮಿತಿ ಆಗ್ರಹಿಸಿದೆ.  

ಮನವಿ ಸಲ್ಲಿಸುವ ವೇಳೆ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ರಾಜ್ಯ ಸಹ ಸಂಚಾಲಕರಾದ ಭವಾನಿಶಂಕರ್ ಎಸ್‌. ಗೌಡ, ಜಿಲ್ಲಾ ಸಂಚಾಲಕರಾದ ವೀರೇಶ್ ನರೇಗಲ್, ಯಲ್ಲಪ್ಪ ದೊರೆ, ಹಾಗೂ ಉದ್ಯೋಗಾಕಾಂಕ್ಷಿಗಳಾದ ನಾಮದೇವ ಕೊಣೂರು, ಮಲ್ಲೇಶ್ ಚೌಹಾಣ್, ಆಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.