ಆಗಸ್ಟ್ 20 ರಂದು ಡಿ ದೇವರಾಜ ಅರಸು ಜಯಂತಿ
August 20th Devaraja Aras Jayanti celebration
ಹುಬ್ಬಳ್ಳಿ ಆ.14: ಪ್ರತಿ ವರ್ಷದಂತೆ ಈ ವರ್ಷವು ಕೂಡ ಅದ್ದೂರಿಯಾಗಿ ಆ.20 ರಂದು ಡಿ ದೇವರಾಜ ಅರಸು ಜಯಂತಿ ಆಚರಣೆ ಮಾಡಲಾಗುವುದು ಎಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೇ. ಬಿ. ಮಜ್ಜಗಿ ಅವರು ಹೇಳಿದರು.
ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಡಿ ದೇವರಾಜ ಅರಸು ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅಂದು ಬೆಳಿಗ್ಗೆ 10 ಗಂಟೆಗೆ ತಾಲೂಕು ಆಡಳಿತ ಸಭಾಭವನದಲ್ಲಿ ಶ್ರೀ ದೇವರಾಜ ಅರಸು ರವರ ಜಯಂತಿ ಆಚರಣೆ ಮಾಡಲಾಗುತ್ತದೆ. ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ,ಸಮಾಜದ ಸಾಧಕ ಮಹಿಳೆಯರಿಗೆ ಸನ್ಮಾನ ಮಾಡಲಾಗುವದು, ಪ್ರಬಂಧ ಸ್ಪರ್ಧೆ, ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಮುಖಂಡರು ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.
ಪೂರ್ವಭಾವಿ ಸಭೆಯಲ್ಲಿ ,ಹಿಂದುಳಿದ ವರ್ಗಗಳ ಇಲಾಖೆಯ ಸಹಾಯಕ ನಿರ್ದೇಶಕಿ ನಾಗರತ್ನಾ ಕ್ಯಾಸನೂರ, ರೈತ ಮುಖಂಡರು ಡಾ.ಡಿ. ಟಿ. ಪಾಟೀಲ್, ಸಂಜುಕುಮಾರ ಸಮಾಜದ ಮುಖಂಡರು,ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 