ರಾಜ್ ಕೋಟ್, ಜ 17: ಮೊದಲ ಪಂದ್ಯದಂತೆ ಇಂದಿನ ಎರಡನೇ ಹಣಾಹಣಿಯಲ್ಲೂ ಆಸ್ಟ್ರೇಲಿಯಾ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ಆದ್ದರಿಂದ ಕೊಹ್ಲಿ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.ರಿಷಭ್ ಪಂತ್ ಅವರ ಬದಲು ಕೆ.ಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಕರ್ನಾಟಕದ ಮನೀಷ್ ಪಾಂಡೆ, ಪಂತ್ ಸ್ಥಾನಕ್ಕೆ ಅಂತಿಮ 11ರಲ್ಲಿ ಸ್ಥಾನ ಪಡೆದಿದ್ದಾರೆ. ಶಾರ್ದೂಲ್ ಠಾಕೂರ್ ಸ್ಥಾನಕ್ಕೆ ನವದೀಪ್ ಸೈನಿ ಆಯ್ಕೆಯಾಗಿದ್ದಾರೆ. ಇನ್ನು, ಎದುರಾಳಿ ಆಸ್ಟ್ರೇಲಿಯಾ ತಂಡದ ಅಂತಿಮ 11ರಲ್ಲಿ ಯಾವುದೇ ಬದಲಾವಣೆ ಇಲ್ಲ.ಅಂತಿಮ 11ಭಾರತ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ(ನಾಯಕ), ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ.ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆ್ಯರೋನ್ ಫಿಂಚ್(ನಾಯಕ), ಮಾರ್ನಸ್ ಲಾಬುಶೇನ್, ಸ್ಟೀವನ್ ಸ್ಮಿತ್, ಆ್ಯಸ್ಟನ್ ಟರ್ನರ್, ಅಲೆಕ್ಸ್ ಕ್ಯಾರಿ (ವಿ.ಕೀ), ಅಸ್ಟನ್ ಅಗರ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್ಸನ್, ಆ್ಯಡಂ ಝಂಪಾ.