ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿ: ಮ್ಯಾಡಿಸನ್ ಕೀಸ್‌ ಗೆ ಚೊಚ್ಚಲ ಕಿರೀಟ

Australian Open Grand Slam Tennis Tournament: Madison Keys wins

ಮೆಲ್ಬರ್ನ್ 25: ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಮೆರಿಕದ ಮ್ಯಾಡಿಸನ್ ಕೀಸ್‌ ಚೊಚ್ಚಲ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಇಂದು ನಡೆದ ಜಿದ್ದಾಜಿದ್ದಿನ ಹಣಾಹಣಿಯಲ್ಲಿ 29 ವರ್ಷದ ಮ್ಯಾಡಿಸನ್ ಅವರು ಅಗ್ರ ಶ್ರೇಯಾಂಕಿತೆ ಬೆಲರೂಸ್‌ನ ಅರಿನಾ ಸಬಲೆಂಕಾ ವಿರುದ್ಧ 6-3, 2-6, 7-5ರ ಅಂತರದಲ್ಲಿ ರೋಚಕ ಜಯ ಗಳಿಸಿದ್ದಾರೆ.

ಇದರೊಂದಿಗೆ 26 ವರ್ಷದ ಸಬಲೆಂಕಾ ಅವರ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯ ಹ್ಯಾಟ್ರಿಕ್ ಕನಸು ಭಗ್ನಗೊಂಡಿದೆ. 2023 ಹಾಗೂ 2024ನೇ ಸಾಲಿನಲ್ಲಿ ಸಬಲೆಂಕಾ ಚಾಂಪಿಯನ್ ಎನಿಸಿಕೊಂಡಿದ್ದರು. ಕಳೆದ ವರ್ಷ ಅಮೆರಿಕನ್ ಓಪನ್ ಪ್ರಶಸ್ತಿ ಕೂಡ ಗೆದ್ದಿದ್ದರು.